ದೆಹಲಿ ಮಾಲಿನ್ಯ: ಕುಶಾಲನಗರದ ಕಾಫಿ ಉದ್ಯಮಿ ಬಲಿ

KannadaprabhaNewsNetwork |  
Published : Nov 11, 2023, 01:18 AM ISTUpdated : Nov 11, 2023, 01:19 AM IST
ಕುಶಾಲನಗರದ ಕಾಫಿ ಉದ್ಯಮಿ ಒಬ್ಬರು ಬಲಿ | Kannada Prabha

ಸಾರಾಂಶ

ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರದೆಹಲಿಯ ವಾಯುಮಾಲಿನ್ಯ ಸಮಸ್ಯೆಗೆ ಸಿಲುಕಿ ಕೊಡಗು ಜಿಲ್ಲೆಯ ಕುಶಾಲನಗರದ ಕಾಫಿ ಉದ್ಯಮಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಸಿದ್ದಾಪುರದ ಗುಹ್ಯ ಗ್ರಾಮದ ನಿವಾಸಿ ಕುಶಾಲನಗರದಲ್ಲಿ ಕಾಫಿ ಉದ್ಯಮ ನಡೆಸುತ್ತಿದ್ದ ನರೇಂದ್ರ ಹೆಬ್ಬಾರ್ (56) ಮೃತರು.ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.ನರೇಂದ್ರ ಅವರು ಕುಶಾಲನಗರದಲ್ಲಿ ಎರಡು ದಶಕಗಳ ಕಾಲ ಕಾಫಿ ಉದ್ಯಮಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಸಮೀಪದ ಕೊಪ್ಪ ಗ್ರಾಮದಲ್ಲಿ ಕೆಫೆ ಕಾಫಿ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಕುಶಾಲನಗರ ರೋಟರಿ ಸದಸ್ಯರಾಗಿದ್ದರು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಿತು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ