ದಿ. ಡಿ ದೇವರಾಜ ಅರಸ್ ಪ್ರಶಸ್ತಿ ಲಭಿಸಿರುವುದು ಸಂತಸವನ್ನುಂಟು ಮಾಡಿದೆ

KannadaprabhaNewsNetwork |  
Published : Oct 05, 2024, 01:31 AM IST
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ ಬಸನಗೌಡ್ರ ಅವರಿಗೆ ದಿ. ಡಿ ದೇವರಾಜ ಅರಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. | Kannada Prabha

ಸಾರಾಂಶ

ಕರ್ನಾಟಕ ಮೊದಲ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರಂತ ಪ್ರಶ್ನಾತೀತ ರಾಜಕಾರಣಿ, ಅಂತವರ ಹೆಸರಿನಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರು ಕೊಡಮಾಡುವ ಪ್ರಶಸ್ತಿಯನ್ನು ಪ್ರಸ್ತುತ ವರ್ಷ ನನಗೆ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಸಂತಸ ವ್ಯಕ್ತಪಡಿಸಿದರು.

ರಟ್ಟೀಹಳ್ಳಿ: ಕರ್ನಾಟಕ ಮೊದಲ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರಂತ ಪ್ರಶ್ನಾತೀತ ರಾಜಕಾರಣಿ, ಅಂತವರ ಹೆಸರಿನಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರು ಕೊಡಮಾಡುವ ಪ್ರಶಸ್ತಿಯನ್ನು ಪ್ರಸ್ತುತ ವರ್ಷ ನನಗೆ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಪ್ರಿಯದರ್ಶಿನಿ ಪ್ರಥಮ ದರ್ಜೆ ವಿದ್ಯಾಸಂಸ್ಥೆ ಹಾಗೂ ಅರಸು ವೇದಿಕೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಹಾಗೂ ದಿ.ದೇವರಾಜ ಅರಸು ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಎರಡು ಭಾರಿ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟು ಸಾಮಾಜಿಕ ಕ್ರಾಂತಿಯನ್ನು ಹುಟ್ಟು ಹಾಕಿದ ಹರಿಕಾರ ಅಂತಹ ಮಹಾನ್ ನಾಯಕನ ಹೆಸರಿನಲ್ಲಿ ನನಗೆ ಪ್ರಶಸ್ತಿ ನೀಡಿರುವುದು ನನಗೆ ಅತ್ಯಂತ ಹೆಮ್ಮೆ. ಕಾರಣ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು.

ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ನನ್ನ ಅಳಿಲು ಸೇವೆಯನ್ನು ಗುರುತಿಸಿ ನನಗೆ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಹಾಗೂ ಸಮಾಜದಲ್ಲಿ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಿಸಿದೆ ಎಂದರು.

ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಲ್. ಗಂಗಾಧರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾಗದೆ ಸಾಮಾಜಿಕವಾಗಿ, ಶೈಕ್ಷಣಿಕ ಪ್ರಚಲಿತ ಸುದ್ದಿಗಳನ್ನು ಅರಿತುಕೋಳ್ಳುವುದು ಅವಶ್ಯಕವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸತ್ಯದ ಇತಿಹಾಸವನ್ನು ಪರಿಚಯಿಸುವುದು ಅತ್ಯಂತ ಅವಶ್ಯವಾಗಿದೆ ಹಾಗೂ ತಿರುಚಿ ಬರೆದ ಇತಿಹಾಸ ಮತ್ತು ಪಠ್ಯಪುಸ್ತಕಗಳನ್ನು ತಪ್ಪಾಗಿ ಅರ್ಥೈಯಿಸ್ಪಟ್ಟ ಪುಸ್ತಕಗಳನ್ನು ತಿರಸ್ಕರಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ವಿಜಯಲಕ್ಷ್ಮೀ ತಿರ್ಲಾಪುರ, ವಿದ್ಯಾರ್ಥಿ ಒಕ್ಕೂಟದ ನಾಮಫಲಕ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳುವ ಹಂತದಲ್ಲಿ ಅನವಶ್ಯಕ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಕಾರಣ ಅಂತಹ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದೆ ತಮ್ಮ ಜೀವನ ರೂಪಿಸಿಕೊಳ್ಳುವಂತಹ ಕಾರ್ಯದಲ್ಲಿ ಭಾಗಿಯಾಗಿ ಹಾಗೂ ವಿದ್ಯಾರ್ಥಿ ಒಕ್ಕೂಟ ರಚನೆಯಲ್ಲಿ ಆಯ್ಕೆಯಾದ ವಿಧ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ಉತ್ತಮವಾಗಿ ನಿಭಾಯಿಸುವುದ ಜೊತೆಗೆ ಉತ್ತಮ ನಾಯಕತ್ವ ಗುಣ ಬೆಳೆಸಿಕೋಳ್ಳಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಸಾಲಿ ವಹಿಸಿಕೊಂಡಿದ್ದರು. ಪ್ರಾಚಾರ್ಯ ಎ.ಜೆ. ರಾಘವೇಂದ್ರ, ವೀರನಗೌಡ ಪ್ಯಾಟಿಗೌಡ್ರ, ವಸಂತ ದ್ಯಾವಕ್ಕಳವರ, ಯು.ಎಂ ಸಾಲಿ, ಬೀರೇಶ ಕರಡೆಣ್ಣನವರ, ಸಿ.ಎಫ್. ಜಾಡರ, ಶಂಭಣ್ಣ ಗೂಳಪ್ಪನವರ, ಸುಭಾಷ ಹದಡೇರ, ಎಚ್.ಎಚ್. ಬ್ಯಾಡಗೌಡ್ರ, ರಾಜು ಪಾಟೀಲ್, ವಿನಯ ಪಾಟೀಲ, ಕಪಿಲ ಪೂಜಾರ, ಅಶೋಕ ಹೆಡಿಯಾಲ, ಪ್ರಾಧ್ಯಾಪಕರಾದ ಡಾ. ಮಂಜುನಾಥ ತಲ್ಲೂರ, ಬಿ.ಸಿ. ತಿಮ್ಮೇನಹಳ್ಳಿ, ವಿ.ಎಸ್. ರೂಳಿ, ಸಿ.ಎಸ್. ಕಮ್ಮಾರ, ಡಾ. ವೈ.ವೈ. ಮರಳೀಹಳ್ಳಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥೀತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ