ಅರ್ಹರಿಗೆ ಸರ್ಕಾರದ ಗ್ಯಾರಂಟಿ ಯಾಯೋಜನೆ ತಲುಪಿಸಿ: ಶ್ರೀನಿವಾಸ್

KannadaprabhaNewsNetwork |  
Published : Aug 15, 2025, 01:00 AM IST
14ಕೆಎಂಎನ್ ಡಿ17 | Kannada Prabha

ಸಾರಾಂಶ

ಗ್ರಾಮೀಣ ಭಾಗದ ಹಲವೆಡೆ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ಈ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸೆಸ್ಕ್ ಇಲಾಖೆ ಅಧಿಕಾರಿಗಳು ಜಾಗೃತಿರಾಗಬೇಕು. ಕೆಲವೆಡೆ ಅಧಿಕಾರಿಗಳ ಸಮನ್ವಯದ ಕೊರತೆ ಕಾಡುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸರ್ಕಾರದ ಯೋಜನೆಗಳು ಫಲಾನಿಭವಿಗಳಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಜನರ ಸಮಸ್ಯೆಗಳಿಂದ ಸ್ಪಂದಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ತಾಪಂ ಇಒ ಎಚ್.ಜಿ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗಳ ತಾಲೂಕು ಸಮಿತಿ ಸಭೆಯಲ್ಲಿ ಮಾತನಾಡಿ, ಸರ್ಕಾರ ಬಡ ಜನರಿಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಸವಲತ್ತು ನೀಡುತ್ತಿದೆ. ಅದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಸಮಿತಿ ಪದಾಧಿಕಾರಿಗಳು ಸಹಯೋಗದೊಂದಿಗೆ ಯೋಜನೆಗಳ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದ ಹಲವೆಡೆ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ಈ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸೆಸ್ಕ್ ಇಲಾಖೆ ಅಧಿಕಾರಿಗಳು ಜಾಗೃತಿರಾಗಬೇಕು. ಕೆಲವೆಡೆ ಅಧಿಕಾರಿಗಳ ಸಮನ್ವಯದ ಕೊರತೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಿತಿ ತಾಲೂಕು ಅಧ್ಯಕ್ಷ ಪಿ.ಮಾದೇಶ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಯ ಹೊರಗುಳಿದಿರುವ ಫಲಾನುಭವಿಗಳಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಎಲ್ಲಾ ಸಾರಿಗೆ ಸೌಲಭ್ಯ ಕಲ್ಪಿಸಲು ಇಲಾಖೆ ಗಮನ ಹರಿಸಬೇಕು. ಯಾವುದೇ ನ್ಯೂನತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ತಾಪಂ ಪಂಚಾಯ್ತಿ ಯೋಜನಾಧಿಕಾರಿ ದೀಪು ಇದ್ದರು.

ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ ವ್ಯವಸ್ಥೆಗೆ ಸೂಚನೆ

ಕನ್ನಡಪ್ರಭ ವಾರ್ತೆ ಮಂಡ್ಯ

ಸ್ವಂತ ಕಚೇರಿ ಹೊಂದಿರದ ಗ್ರಾಮ ಆಡಳಿತ ಅಧಿಕಾರಿಗಳಿಗೆ (ವಿಎಒ) ಗ್ರಾಮ ಪಂಚಾಯ್ತಿ ಕಟ್ಟಡ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ ಕಚೇರಿ ವ್ಯವಸ್ಥೆ ಮಾಡಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶಾಸಕ ಮಧು ಜಿ.ಮಾದೇಗೌಡ ಅವರು ವಿಎಒಗಳಿಗೆ ಕರ್ತವ್ಯ ನಿರ್ವಹಿಸಲು ನಿರ್ದಿಷ್ಟ ಸ್ಥಳದಲ್ಲಿ ಕಚೇರಿ ಇಲ್ಲದಿರುವುದರಿಂದ ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್ತಿನ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ2(5)ರಲ್ಲಿ ಅಗತ್ಯಪಡಿಸಲಾದಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ ಸ್ಥಳವನ್ನು ನಿಗದಿಪಡಿಸಿ ತಾಲ್ಲೂಕುವಾರು ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 416 ವಿ.ಎ.ಎ.ಗಳಿಗೆ ಕಚೇರಿ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ