ಪ್ರಗತಿ ಪರಿಶೀಲನಾ ಸಭೆ । ಅಧಿಕಾರಿಗಳಿಗೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸೂಚನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯರೊಂದಿಗೆ ಜರುಗಿದ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದರು.
ಅಲೆಮಾರಿ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡಬೇಕು. ಅಧಿಕಾರಿಗಳು ಒಂದು ಬಾರಿಯೂ ನಮಗೆ ಭೇಟಿಯಾಗಿಲ್ಲ. ನಮ್ಮ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಹಲವಾರು ದೂರುಗಳು ನಮಗೆ ಬಂದಿವೆ. ಜಿಲ್ಲೆಯಲ್ಲಿ 43 ಸಾವಿರಕ್ಕಿಂತ ಹೆಚ್ಚಿನ ಅಲೆಮಾರಿ ಸಮುದಾಯಗಳ ಜನರು ಇದ್ದಾರೆ ಎಂದು ಹೇಳಿದರು.
ಸಾಮಾಜಿಕ ಪ್ರಜ್ಞೆ ಇಲ್ಲದ ಸಣ್ಣ-ಸಣ್ಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ಅಲೆಮಾರಿ ಅಭಿವೃದ್ಧಿ ಕೋಶದಿಂದ ಈಗ ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತನೆ ಮಾಡಿದೆ. ಪಾರದರ್ಶಕವಾಗಿ ನಮ್ಮ ನಿಗಮದಿಂದ ಫಲಾನುಭವಿಗಳಿಗೆ ಸರ್ಕಾರದ ಲಾಭ ಸಿಗಬೇಕು. ಪ್ರತಿವರ್ಷ ನಮ್ಮ ನಿಗಮದಿಂದ ಆನಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗುತ್ತದೆ. ಸ್ವಾತಂತ್ರ‍್ಯ ಸಿಕ್ಕು 78 ವರ್ಷಗಳಾದರು ಇನ್ನೂ ಅಲೆಮಾರಿ ಸಮಾಜ ನಿರ್ಲಕ್ಷಿತ ಸಮುದಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ನಲಿನ್ ಅತುಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಆನಂದ ಏಕಲವ್ಯ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಹೆಚ್ಚುವರಿ ಎಸ್ಪಿ ಹೇಮಂತ ಕುಮಾರ, ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಅಲೆಮಾರಿ ಸಮುದಾಯದ ಮುಖಂಡರು ಇದ್ದರು.