ಸರ್ಕಾರದ ಯೋಜನೆ ಸಮರ್ಪಕ ತಲುಪಿಸಿ

KannadaprabhaNewsNetwork |  
Published : Jun 17, 2026, 02:15 AM IST
ಪೋಟೊ16ಕೆಎಸಟಿ1: ಕುಷ್ಟಗಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡರು. | Kannada Prabha

ಸಾರಾಂಶ

ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕುಡಿವ ನೀರು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಸಂಬಂಧಿಸಿದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು

ಕುಷ್ಟಗಿ: ಸರ್ಕಾರದ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕುಡಿವ ನೀರು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಸಂಬಂಧಿಸಿದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಪಂ ಇಒ ಅಮರೇಶ ಮಾತನಾಡಿ, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು, ಕುಡಿವ ನೀರು, ಶಿಕ್ಷಣ, ಆರೋಗ್ಯ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಕಾತರಕಿ ಮಾತನಾಡಿ, ಕುಷ್ಟಗಿ ಮತ್ತು ತಾವರಗೇರಾ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಹನಮಸಾಗರ ಹಾಗೂ ಹನಮನಾಳ ಭಾಗಗಳಲ್ಲಿ ಮಳೆಯ ಕೊರತೆ ಇದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಶೇ.53ರಷ್ಟು ಬಿತ್ತನೆ ಪೂರ್ಣಗೊಂಡಿದ್ದು, ಯಾವುದೇ ಬೀಜದ ಕೊರತೆ ಇಲ್ಲ ಎಂದು ಹೇಳಿದ ಅವರು, ಕಾಂಪ್ಲೆಕ್ಸ್ ಗೊಬ್ಬರದ ಬೆಲೆ ಏರಿಕೆಯಿಂದ ರೈತರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು ಮಾತನಾಡಿ, ಎರಡು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದ್ದು, ಜನವರಿ ತಿಂಗಳಿಂದ ಇಲ್ಲಿಯವರೇಗೆ 3 ಡೆಂಘೀ ಹಾಗೂ 6 ಚಿಕಕ್‌ಗುನ್ಯಾ ಪ್ರಕರಣ ದಾಖಲಾಗಿದ್ದು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು, ಕುಷ್ಟಗಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಎಮ್ಸಿಎಚ್ ಆಸ್ಪತ್ರೆ ಕಟ್ಟಡದ ಕಾಂಪೌಂಡ್ ಕಾಮಗಾರಿ ಪೂರ್ಣಗೊಂಡ ನಂತರ ಮುಂದಿನ ತಿಂಗಳಿನಿಂದ ಸೇವೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಬಿಇಒ ಉಮಾದೇವಿ ಬಸಾಪೂರು ಮಾತನಾಡಿ, ಕುಷ್ಟಗಿ ತಾಲೂಕಿನ ಶಾಲೆಗಳಲ್ಲಿ ಒಟ್ಟು 59,830 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ. ಆದರೆ ಕೆಲವು ವಿಷಯಗಳ ಪುಸ್ತಕಗಳು ಇನ್ನೂ ಬರಬೇಕಿದ್ದು, ಶೀಘ್ರದಲ್ಲೇ ಪೂರೈಕೆ ಆಗಲಿದೆ ಎಂದ ಅವರು, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿರುವ ಸಮವಸ್ತ್ರ ಪ್ಯಾಂಟ್‌ಗಳು ಇನ್ನೂ ಬಂದಿಲ್ಲ. ಪೂರೈಕೆಯಾದ ತಕ್ಷಣ ವಿದ್ಯಾರ್ಥಿಗಳಿಗೆ ವಿತರಿಸಲಾಗುವದು ಹತ್ತನೇ ತರಗತಿಯ ಫಲಿತಾಂಶ ಶೇ. 93ರಷ್ಟು ಬಂದಿದೆ ಎಂದು ತಿಳಿಸಿದರು.

ಸಿಡಿಪಿಒ ಯಲ್ಲಮ್ಮ ಹಂಡಿ ಮಾತನಾಡಿ, ತಾಲೂಕಿನಲ್ಲಿ 403 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 63 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 11 ಕೇಂದ್ರಗಳಿಗೆ ಸ್ವಂತ ನಿವೇಶನವೇ ಇಲ್ಲ ಎಂಬ ಮಾಹಿತಿ ನೀಡಿದರು ಇದಕ್ಕೆ ಉತ್ತರಿಸಿದ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಸರ್ಕಾರದ ಆದೇಶದಂತೆ ನಿವೇಶನ ಲಭ್ಯವಿಲ್ಲದಿದ್ದಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂಗನವಾಡಿಗಳಿಗೆ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಬೇಕಿದೆ ಎಂದು ಬಿಇಒ ಉಮಾದೇವಿ ಬಸಾಪೂರು ಹಾಗೂ ಪಿಡಿಒಗಳಿಗೆ ಸೂಕ್ತ ಸಲಹೆ ನೀಡಿದರು.

ಇದೆ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ದಿ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಕಾಂಗ್ರೆಸ್ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸಲಿ
ನೀರಿನ ಸಂಗ್ರಹ, ಮೂಲಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಿ