ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಕೆ.ಆರ್.ನಂದಿನಿ

KannadaprabhaNewsNetwork |  
Published : Apr 20, 2025, 01:48 AM IST
19ಕೆಎಂಎನ್ ಡಿ31 | Kannada Prabha

ಸಾರಾಂಶ

ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ವಿತರಿಸುವ ಸಂದರ್ಭದಲ್ಲಿ ಸಾರ್ವಜನಿಕರ ಬಳಿ ಯಾವುದೇ ಹಣ ಪಡೆಯದೆ ಪಂಡಿತರ ನೀಡಬೇಕು. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಪಡೆಯುತ್ತಿದ್ದರೆ ಸಾರ್ವಜನಿಕರು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ವ್ಯವಸ್ಥಿತವಾಗಿ ತಲುಪಿಸಲು ಅಧಿಕಾರಿಗಳು ಎಲ್ಲಾ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾಗುತ್ತದೆ ಎಂದರು.

ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ವಿತರಿಸುವ ಸಂದರ್ಭದಲ್ಲಿ ಸಾರ್ವಜನಿಕರ ಬಳಿ ಯಾವುದೇ ಹಣ ಪಡೆಯದೆ ಪಂಡಿತರ ನೀಡಬೇಕು. ಈ ವ್ಯವಸ್ಥೆಯನ್ನು ಸರಿ ಮಾಡಬೇಕಾಗಿದೆ. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಪಡೆಯುತ್ತಿದ್ದರೆ ಸಾರ್ವಜನಿಕರು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 448769 ಅರ್ಹ ಫಲಾನುಭವಿಗಳಿದ್ದು , ಜನವರಿ ಮಾಹೆಯ ಗೃಹಲಕ್ಷಿ ಹಣವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಜನವರಿ 24 ರಿಂದ ಜನವರಿ 2025 ರವರೆಗೆ ರೂ 1099.09 ಕೋಟಿ ಅನುದಾನ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಧನುಷ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು ಕೆ.ಸಿ ಮತ್ತು ರಾಜೇಂದ್ರ ಎಸ್.ಎಚ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ರುದ್ರಪ್ಪ, ವೀಣಾ, ಬಸವರಾಜು, ಮೊಹಮ್ಮದ್ ಅನ್ಸರ್, ಅನ್ಸರ್ ಪಾಷಾ, ರಮೇಶ್, ಪಿ.ಮಾದೇಶ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ