ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಮಾತನಾಡಿ, ಬ್ಯಾಂಕುಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು ಬ್ಯಾಂಕ್‌ಗಳ ಸೇವೆ ಸ್ಮರಣೀಯವಾಗಿರುತ್ತದೆ. ಸರ್ಕಾರದ ಪ್ರತಿಯೊಂದು ಸೌಲಭ್ಯವು ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೂ ತಲುಪುಂತಾಗಬೇಕು. ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ನಿಲುಕುವಂತೆ ಸರಳಗೊಳಿಸಿ ನೀಡಬೇಕು ಎಂದು ತಿಳಿಸಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ ಬ್ಯಾಂಕುಗಳಲ್ಲಿ ಸುಮಾರು ಅರ್ಧದಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಬ್ಯಾಂಕ್ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸಾಲ, ಶಿಕ್ಷಣ ಸಾಲ, ವಸತಿ ಯೋಜನೆಯಡಿ ಸಾಲ ವಿತರಣೆಗೆ ಆದ್ಯತೆ ನೀಡಬೇಕು ಎಂದರು.ಬ್ಯಾಂಕ್‌ಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ಮಾಹಿತಿ ನೀಡಬೇಕು. 260 ಬ್ರಾಂಚ್‌ಗಳಲ್ಲಿ ಮಾತ್ರ ಡಿಎಲ್‌ಸಿಸಿ ಸಭೆ ಆಗಿದೆ. 85 ಬ್ರಾಂಚ್‌ಗಳಲ್ಲಿ ಆಗಿಲ್ಲ. ನಿಯಮಿತವಾಗಿ ಸಭೆಗಳನ್ನು ಕೈಗೊಂಡು ಕ್ರಮ ವಹಿಸಬೇಕೆಂದು ತಿಳಿಸಿದರು.
ಕೆನರಾ ಬ್ಯಾಂಕ್ ಡಿಜಿಎಂ ಮತ್ತು ಪ್ರಾದೇಶಿಕ ಮುಖ್ಯಸ್ಥರಾದ ದೇವರಾಜ್ ಆರ್ ಮಾತನಾಡಿ, 2025 ರ ಡಿಸೆಂಬರ್ ಅಂತ್ಯಕ್ಕೆ ಕೃಷಿ ಕ್ಷೇತ್ರದಲ್ಲಿ ಶೇ.74.26 ಪ್ರಗತಿ ಸಾಧನೆ ಮಾಡಿದ್ದು 2024 ನೇ ಸಾಲಿಗಿಂತ ಶೇ.31.26 ಪ್ರಗತಿ ಸಾಧಿಸಲಾಗಿದೆ. ಎಂಎಸ್‌ಎಂಇ ವಲಯದಲ್ಲಿ ಶೇ.80.03 ಪ್ರಗತಿ ಸಾಧಿಸಿದ್ದು, 2024 ನೇ ಸಾಲಿಗಿಂತ ಶೇ.11.49 ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಹಣಕಾಸು ಸಾಕ್ಷರತಾ ಕೇಂದ್ರ(ಎಫ್‌ಎಲ್‌ಸಿ)ಗಳು ಹಾಗೂ ಸೆಂಟರ್ ಫಾರ್ ಫೈನಾನ್ಶಿಯಲ್ ಲಿಟರಸಿಗಳು ಪರಿಣಾಮಕಾರಿಯಾಗಿ ಆಯ್ದ ಸ್ಥಳಗಳಲ್ಲಿ ಶಿಬಿರಗಳನ್ನು, ಸಭೆಗಳನ್ನು ನಡೆಸಿ ಬ್ಯಾಂಕ್ ಖಾತೆ ತೆರೆಯುವುದು, ವಿವಿಧ ಯೋಜನೆಗಳು ಸೇರಿದಂತೆ ಹಣಕಾಸು ವಿಷಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಪಿಎಂಇಜಿಪಿ, ಪಿಎಂ ಸೂರ್ಯ ಘರ್ ಪಿಎಂ ಎಫ್‌ಎಂಇ ಯೋಜನೆಯಡಿ 15 ಫಲಾನುಭವಿಗಳಿಗೆ ಶಾಮಿಯಾನ, ರೋಟಿ ಮೇಕರ್, ಶಿಕ್ಷಣಕ್ಕೆ ಸಂಬಂಧಿಸಿದ ಸಾಲದ ಚೆಕ್‌ನ್ನು ವಿತರಿಸಲಾಯಿತು.