- ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದ ಪಿಎಂ ವಿಶ್ವಕರ್ಮ ಯೋಜನೆ ಕರಪತ್ರ ಬಿಡುಗಡೆ
ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿಎಂ ವಿಶ್ವಕರ್ಮ ಯೋಜನೆ ಕರಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಮಾತನಾಡಿದರು. ಸರ್ಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಜೊತೆಗೆ ಅವರಿಗೆ ಆರ್ಥಿಕ ಸೌಲಭ್ಯ ಕಲ್ಪಿಸಿ ಸ್ವಾವಲಂಬಿ ಜೀವನ ನಡೆಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದರು.ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಶಲ ಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮತ್ತು ಆಧಾರ್ ಆಧಾರಿತ, ಬಯೋಮೆಟ್ರಿಕ್, ದೃಢೀಕೃತ ಪಿಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಅವರು, ಸ್ಥಳೀಯ ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾಪಿಸಲಾದ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ಯೋಜನೆಗೆ ನೋಂದಣಿ ಮಾಡಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲ..
ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿ.ಎಂ. ವಿಶ್ವಕರ್ಮ ಯೋಜನೆ ಕರಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮೀನಾ ನಾಗರಾಜ್ ಗುರುವಾರ ಬಿಡುಗಡೆ ಮಾಡಿದರು.