ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ : ಡಾ. ಅಂಶುಮಂತ್

KannadaprabhaNewsNetwork |  
Published : Oct 14, 2025, 01:00 AM IST
ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿದರು. ಎಂ.ಸಿ. ಶಿವಾನಂದಸ್ವಾಮಿ, ಚಂದ್ರಭೂಪಾಲ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರುರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಸದಸ್ಯರು ನಿರ್ವಹಿಸಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಕರೆ ನೀಡಿದರು.

- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಸದಸ್ಯರು ನಿರ್ವಹಿಸಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಕರೆ ನೀಡಿದರು.ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ, ಯುವಕರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೋಟ್ಯಂತರ ರು.ಗಳನ್ನು ಜನರಿಗಾಗಿ ವ್ಯಯಿಸುವ ಮೂಲಕ ಬಡವರ್ಗದವರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದರು.

ಪ್ರಸ್ತುತ ಎರಡು ಜಿಲ್ಲೆಗಳ ಸಹಭಾಗಿತ್ವದಲ್ಲಿ ಆಯೋಜಿಸಿರುವ ಸಭೆಯಲ್ಲಿ ಗ್ಯಾರಂಟಿ ಪ್ರಾಧಿಕಾರದ ಸದಸ್ಯರು ಸಹಕಾರ, ಸಲಹೆ ಹಾಗೂ ವಿಚಾರ ತಿಳಿಸಿದರೆ ಸರ್ಕಾರದ ಮಟ್ಟದಲ್ಲಿ ಧ್ವನಿಯಾಗಿ ತಾವು ಸೇರಿದಂತೆ ಗ್ಯಾರಂಟಿ ಅಧ್ಯಕ್ಷರು ಕೆಲಸ ಮಾಡಲಿದ್ದಾರೆ ಎಂದರು.

ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿ ನೀಡಲಾಗಿದ್ದು ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆಯಿಂದ ಕೂಡಿರಲು ಹಲವಾರು ಯೋಜನೆ ಜಾರಿಗೊಳಿಸುವ ಮೂಲಕ ಕೃಷಿ ಬೆಳೆಗಳ ಅಧಿಕ ಇಳುವರಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ರಾಜ್ಯದ ರೈತರು, ಕಾರ್ಮಿಕರಿಗೆ ಸರ್ಕಾರ ನಿರಂತರವಾಗಿ ಸ್ಪಂದಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಸಹಕಾರ ಸಂಘದ ಸುಭದ್ರತೆ ಒತ್ತು, ಸ್ವಸಹಾಯ ಮಹಿಳಾ ಗುಂಪುಗಳಿಗೆ ಪೂರಕ ಸೌಲಭ್ಯ ಕಲ್ಪಿಸಿ, ಸ್ವಾವಲಂಬಿ ಬದುಕಿಗೆ ಆಸರೆಯಾಗಿ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅಕ್ಕಿ ವಿತರಿಸಿದ್ದು ಮುಂದಿನ ದಿನಗಳಲ್ಲಿ ಹೊಸ ದಾಗಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ. ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿಗೊಳಿಸಿ ವಿಶ್ವಾಸ ಹಾಗೂ ನಂಬಿಕೆಗೆ ಅರ್ಹವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.ದೇಶದ ಬೆನ್ನಲುಬು ರೈತರಿಗೆ ನೀರಿನ ಸಮರ್ಪಕ ಬಳಕೆ ದೃಷ್ಟಿಯಿಂದ ಜಾಗೃತಿ ಮೂಡಿಸುವ ಕಾರ್ಯ ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ. ಈ ಬಗ್ಗೆಗ್ಯಾರಂಟಿ ಸದಸ್ಯರು ಸಲಹೆ, ಸಹಕಾರ ನೀಡಿದರೆ ಗೌರವಿಸುವ ಗುಣವನ್ನು ಆಡಳಿತ ಮಂಡಳಿ ಮಾಡಲಿದೆ ಎಂದರು. ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊಗ್ಗದತ್ತ ಸಾಗಿ ಲಕ್ಷಾಂತರ ಮಂದಿಗೆ ಕುಡಿಯುವ ನೀರಾಗುತ್ತಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆ ಹಾಗೂ ಸಮರ್ಪಕ ನೀರು ಬಳಸುವ ಸಂಬಂಧ ಜಿಲ್ಲಾ, ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಕೆಲಸ ಮಾಡುವ ಆಲೋಚನೆಯಿದ್ದು ಶಿವಮೊಗ್ಗದಲ್ಲೂ ಈ ರೀತಿಯ ಕಾರ್‍ಯ ಚಟುವಟಿಕೆಗಳು ಕೈಗೊಂಡರೆ ಉಪಯೋಗ ವಾಗಲಿದೆ. ಗ್ಯಾರಂಟಿ ಯೋಜನೆ ಜನರಿಂದ ತೆರಿಗೆ ಪಡೆದು, ಜನರಿಗಾಗಿ ವ್ಯಯಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಅನುಷ್ಟಾನಗೊಂಡು ಶೇ. 98.5 ರಷ್ಟು ಪ್ರಗತಿ ಸಾಧಿಸಿ, ಕೋಟ್ಯಾಂತರ ಹಣ ರಾಜ್ಯ ಸರ್ಕಾರ ಜಿಲ್ಲೆಗೆ ಭರಿಸಿದೆ. ಅಲ್ಲದೇ ಉದ್ಯೋಗ ಮೇಳ ನಡೆಸಿ ಶೇ. 90 ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡ ಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಭದ್ರಾ ಕಾಡಾ ಪ್ರಾಧಿಕಾರದ ಆಡಳಿತಾಧಿಕಾರಿ ಆರ್.ಸತೀಶ್, ಭೂ ಅಭಿವೃದ್ಧಿ ಅಧಿಕಾರಿ ತಾಂತ್ರಿಕ, ಪ್ರಭಾರ ಕೃಷಿ ಅಧಿಕಾರಿ ಕೆ.ಪ್ರಶಾಂತ್, ಭೂ ಅಭಿವೃದ್ಧಿ ಅಧಿಕಾರಿ ಸಹಕಾರ ಶಾಖೆ ಡಾ. ನಾಗೇಶ್ ಡೊಂಗ್ರೆ, ಚಿಕ್ಕಮಗಳೂರು - ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.13 ಕೆಸಿಕೆಎಂ 1ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿದರು. ಎಂ.ಸಿ. ಶಿವಾನಂದಸ್ವಾಮಿ, ಚಂದ್ರಭೂಪಾಲ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ