ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಶಾಸಕ ಯಾಸೀರ್ ಅಹ್ಮದಖಾನ ಪಠಾಣ

KannadaprabhaNewsNetwork |  
Published : Jun 22, 2025, 11:47 PM IST
ಪೊಟೋ ಪೈಲ್ ನೇಮ್ ೨೨ಎಸ್‌ಜಿವಿ೧ ಶಿಗ್ಗಾಂವಿ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಾಸೀರ್ ಅಹ್ಮದಖಾನ  ಪಠಾಣ್ ಅವರು ಅಂಗನವಾಡಿಗಳಿಗೆ ಪುಸ್ತಕ ಹಾಗೂ ಟಿವಿಗಳನ್ನು ವಿತರಿಸಿದರು.೨೨ಎಸ್‌ಜಿವಿ೧-೧ ಶಿಗ್ಗಾಂವಿ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಾಸೀರ್ ಅಹ್ಮದಖಾನ  ಪಠಾಣ್ ಮಾತನಾಡಿದರು | Kannada Prabha

ಸಾರಾಂಶ

ಹೊಸ ಬಿಪಿಎಲ್ ಪಡಿತರ ಕಾರ್ಡ್ ಮಾಡಿಕೊಡಲು ಏಜೆಂಟರಾಗಲಿ, ಅಧಿಕಾರಿಗಳಾಗಲಿ ಹಣ ಕೇಳಿದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೆಕಾಗುತ್ತದೆ ಎಂದು ಶಾಸಕ ಯಾಸೀರ್ ಅಹ್ಮದಖಾನ ಪಠಾಣ ಎಚ್ಚರಿಕೆ ನೀಡಿದರು.

ಶಿಗ್ಗಾಂವಿ: ಗ್ಯಾರಂಟಿ ಯೋಜನೆ ಅನುಷ್ಠಾನ ಶೇ. ೯೭ಷ್ಟು ಯಶಸ್ವಿಯಾಗಿದ್ದು, ಕೇವಲ ಶೇ. ೩ರಷ್ಟು ಮಾತ್ರ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿಲ್ಲ ಎಂದು ಶಾಸಕ ಯಾಸೀರ್ ಅಹ್ಮದಖಾನ ಪಠಾಣ ತಿಳಿಸಿದರು.ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಕ್ಷಣ ಗ್ಯಾರಂಟಿ ಯೋಜನೆಯಲ್ಲಿ ಕಟ್ಟಕಡೆಯ ಜನರಿಗೂ ಸೌಲಭ್ಯ ನೀಡಬೇಕು ಎಂದರು.

ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಕಳೆದ ಮೂರು ತಿಂಗಳಿಂದ ಕಮಿಷನ್ ಬಂದಿಲ್ಲ ಎಂದು ನ್ಯಾಯಬೆಲೆ ಅಂಗಡಿಯವರ ಪರವಾಗಿ ಶಿವಾನಂದ ಕಮಡೊಳ್ಳಿ ಮಾಹಿತಿ ನೀಡಿದರು.

ಅದಕ್ಕೆ ಶಾಸಕ ಪಠಾಣ ಅವರು, ಸರ್ಕಾರ ಬಂದು ೨೭ ತಿಂಗಳಾಯಿತು. ಕೇವಲ ಮೂರು ತಿಂಗಳ ಕಮಿಷನ್ ಬಗ್ಗೆ ಯಾಕೆ ಆತಂಕ ಆಗಿದ್ದೀರಿ? ಸರ್ಕಾರ ಮಾಡಿಕೊಡುತ್ತದೆ ಎಂದರು.

ಹೊಸ ಬಿಪಿಎಲ್ ಪಡಿತರ ಕಾರ್ಡ್ ಮಾಡಿಕೊಡಲು ಏಜೆಂಟರಾಗಲಿ, ಅಧಿಕಾರಿಗಳಾಗಲಿ ಹಣ ಕೇಳಿದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೆಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಷ್ಟದಲ್ಲಿರುವ ಮನೆಗಳಿಗೆ ಮೊದಲು ವಿದ್ಯುತ್ ಸಂಪರ್ಕ ಕೊಡಿ. ಹೆಸ್ಕಾಂ ಎಇಇ ಅವರಿಗೆ ಹರಿಹಾಯ್ದ ಶಾಸಕರು, ಎಸ್ಟಿಪಿ, ಟಿಎಸ್ಪಿ ಯೋಜನೆಯನ್ನು ನನ್ನ ಗಮನಕ್ಕೆ ತಂದು ಕ್ರಿಯಾಯೋಜನೆ ಮಾಡಿ ಎಂದು ತಾಕೀತು ಮಾಡಿದರು. ನಮ್ಮ ಡಿಪೋದಿಂದ ತೆರಳುವ ಅಂತರರಾಜ್ಯ ಬಸ್‌ಗಳನ್ನು ಬಂದ್ ಮಾಡಿ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ಕಲ್ಪಿಸಿ ಎಂದು ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ನದಾಫ್‌ಗೆ ಸೂಚಿಸಿದರು.ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲೂಕು ಘಟಕದ ಅಧ್ಯಕ್ಷ ಶೇಖಪ್ಪ ಮನಕಟ್ಟಿ, ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ತಾಪಂ ಇಒ ಮಂಜುನಾಥ ಸಾಳೋಂಕೆ ಇತರರು ಇದ್ದರು.ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಹಾನಗಲ್ಲ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ಸದಸ್ಯರ ಸಭೆ ಜೂ. 23ರಂದು ಇಲ್ಲಿನ ಡಾ. ಬಾಬುಜಗಜೀವನರಾಮ ಭವನದಲ್ಲಿ ನಡೆಯಲಿದೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾರಂಭವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಪ್ರತಿಭಾ ಪುರಸ್ಕಾರ ನಡೆಸಿಕೊಡುವರು. ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ನಿವೃತ್ತ ನೌಕರರಿಗೆ ಸನ್ಮಾನಿಸುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಸಲೀಂ ಅಹಮ್ಮದ ಮೊದಲಾದವರು ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮಾರಂಭ ಅಧ್ಯಕ್ಷತೆಯವನ್ನು ಸಂಘದ ತಾಲೂಕು ಅಧ್ಯಕ್ಷ ಗುರುನಾಥ ಗವಾಣಿಕರ ವಹಿಸುವರು ಎಂದು ಕಾರ್ಯದರ್ಶಿ ಬಸವರಾಜ ಕುಂಚೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌