ಜನರಿಗೆ ಯೋಜನೆ ತಲುಪಿಸಿ: ಸಂಸದ ಹಿಟ್ನಾಳ

KannadaprabhaNewsNetwork |  
Published : May 11, 2025, 01:16 AM IST
8ಕೆಪಿಎಲ್23 ಅಳವಂಡಿ ಗ್ರಾಮದಲ್ಲಿ ಹೋಬಳಿ ಮಟ್ಟದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿಪರಿಶೀಲನಾ ಸಭೆ. | Kannada Prabha

ಸಾರಾಂಶ

ಇಲಾಖಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸಬೇಕು. ವಿವಿಧ ಯೋಜನೆಗಳ ಅನುದಾನ ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಬೇಕು.

ಕೊಪ್ಪಳ:

ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ್ ಸೂಚಿಸಿದರು.

ತಾಲೂಕಿನ ಅಳವಂಡಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಳವಂಡಿ ಹೋಬಳಿ ಮಟ್ಟದ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಲಾಖಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸಬೇಕು. ವಿವಿಧ ಯೋಜನೆಗಳ ಅನುದಾನ ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಬೇಕು ಎಂದ ಅವರು, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ ಎಂದರು. ಮಹಾತ್ಮ ಗಾಂಧಿ ನರೇಗಾ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ವಚ್ಛ ಭಾರತ ಮಿಷನ್, ಎನ್ಆರ್‌ಎಲ್‌ಎಂ ಸಂಜೀವಿನಿ ಬಹು ದೊಡ್ಡ ಯೋಜನೆಗಳಾಗಿದ್ದು ಎಲ್ಲರೂ ಈ ಯೋಜನೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಬೇಕು. ಕೃಷಿ, ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ರೈತರಿಗೆ ದೊರೆಯಲು ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸಕ್ತ ನರೇಗಾ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಎನ್ಆರ್‌ಎಲ್‌ಎಂ ಸಂಜಿವಿನಿ ಯೋಜನೆಯ ಮತ್ತು ಕೃಷಿ, ತೋಟಗಾರಿಕೆ, ಜೆಜೆಎಂ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು.

ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ನರೇಗಾ ಯೋಜನೆಯ ಮಾರ್ಗಸೂಚಿಯ ಪ್ರಕಾರ ಅನುಷ್ಠಾನಗೊಳಿಸಲು ಅವಕಾಶವಿದ್ದಲ್ಲಿ ಮಾತ್ರ ಕೈಗೊಳ್ಳಬೇಕಾಗುತ್ತದೆ ಎಂದ ಸಂಸದರು, ಜೆಜೆಎಂ ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮಕ್ಕೆ ಅವಶ್ಯವಿರುವ ಸೌಲಭ್ಯ, ಕಾಮಗಾರಿ ಕುರಿತು ಮನವಿ ಸಲ್ಲಿಸಿದರು.

ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ತಾಪಂ ಸಿಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠಲ್ ಚೌಗಲಾ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಬಾಲಚಂದ್ರನ್, ಗ್ರಾಪಂ ಉಪಾಧ್ಯಕ್ಷೆ ಶಾರದಮ್ಮ ಈಳಿಗೇರ, ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಅಧಿಕಾರಿಗಳು, ಸಿಬ್ಬಂದಿ ಸೇರಿದಂ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ: 9ರಂದು ಬೃಹತ್ ಜನಾಗ್ರಹ ಸಭೆ
ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್