ತಾಲೂಕು ಕಚೇರಿ ಎದುರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ
ಗೌರಿಲಂಕೇಶ್ ಹತ್ಯೆ ನಡೆಸಿದ ಆರೋಪಿಗಳನ್ನು ಸನ್ಮಾನಿಸಿದ ಸಂಘಟನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗೌರಿ ಬಳಗ ಹಾಗೂ ಗೌರಿ ಸ್ಮಾರಕ ಟ್ರಸ್ಟ್ ನಿಂದ ತಾಲೂಕು ಕಚೇರಿ ಎದುರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹತ್ಯೆ ನಡೆಸಿದ ಕೊಲೆಪಾತಕರಿಗೆ ಮಾಡಿರುವ ಸನ್ಮಾನ ಮಾನವೀಯತೆ, ಕರ್ನಾಟಕ ಹಾಗೂ ದೇಶದ ಸಂವಿಧಾನಕ್ಕೆಮಾಡಿರುವ ಅಪಮಾನವಾಗಿದೆ. ಹಂತಕರಿಗೆ ಸನ್ಮಾನ ಮಾಡುವ ಮೂಲಕ ಹಿಂಸೆಗೆ ಪ್ರಚೋದನೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಚೋದನೆ ಅಡಿ ಪ್ರಕರಣ ದಾಖಲಿಸಬೇಕು. ಪ್ರಕರಣದ ಮೊತ್ತೊಬ್ಬ ಆರೋಪಿ ಕಾಂಟ್ರೊಂಗರಕ ಜಾಮೀನಿನ ಮೇಲೆ ಬಿಡುಗಡೆಗೊಂಡು ಮಹಾರಾಷ್ಟ್ರದ ಚುನಾವಣೆಯಲ್ಲಿ ಸಕ್ರೀಯ ಪಾತ್ರ ವಹಿಸುತ್ತಿರುವುದನ್ನು ಅಲ್ಲಿಯ ರಾಜಕೀಯ ಪಕ್ಷಗಳು ಆತನನ್ನು ಆಹ್ವಾನಿಸಿರುವುದನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಿ ಆರೋಪಿಗಳಿಗೆ ಶೀಘ್ರವೇ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಹಿಂಸೆ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
22 ಶ್ರೀ ಚಿತ್ರ 1-