ಸಂಪುಟದಲ್ಲಿ ಮಂಜುನಾಥ್ ಭಂಡಾರಿಗೆ ಸ್ಥಾನಕ್ಕೆ ಆಗ್ರಹ

KannadaprabhaNewsNetwork |  
Published : May 29, 2026, 02:30 AM IST
ಶೆಟ್ಟಿ ಒ | Kannada Prabha

ಸಾರಾಂಶ

ಸಚಿವ ಸಂಪುಟ ಪುನರ್ ರಚನೆ ಮಾಡುವಾಗ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಸಚಿವ ಸಂಪುಟ ಪುನರ್ ರಚನೆ ಮಾಡುವಾಗ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ ಒತ್ತಾಯಿಸಿದರು.ಅವರು ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮಂಜುನಾಥ್ ಭಂಡಾರಿ ಅವರು 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಕೊಡುಗೆ ಅಪಾರ. ರಾಜ್ಯದ ಎಲ್ಲ ಮಂತ್ರಿಗಳ ಜೊತೆ ನಿಕಟ ಸಂಪರ್ಕ ಇರುವ ಅವರು ಎಲ್ಲರ ಸಮಸ್ಯೆಗೆ ಸ್ಪಂದಿಸುತ್ತಾರೆ.ಸದ್ಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕಾರ್ಯಕರ್ತರಿಗೆ ಅದರಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಅವರ ಮಾರ್ಗದರ್ಶನ ಸ್ಪೂರ್ತಿದಾಯಕ. ಇಂತವರು ಸಚಿವರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದರೆ ಈಗಾಗಲೇ ಐದು ಕ್ಷೇತ್ರಗಳಲ್ಲಿ ಸೋತಿರುವ ಪಕ್ಷಕ್ಕೆ, ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗುತ್ತದೆ. ಉಡುಪಿ ಜಿಲ್ಲೆಯಿಂದ ಮಂಜುನಾಥ್ ಭಂಡಾರಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸಲಾಂ ಮತ್ತು ರಕ್ಷಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಟರಾಜ್ ಹೊಳ್ಳ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಅಲ್ಪಸಂಖ್ಯಾತರ ಘಟಕ ಕುಂದಾಪುರ ಬ್ಲಾಕ್ ಅಧ್ಯಕ್ಷ ಮುನಾಫ್ ಕೋಡಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ಜು.1ರೊಳಗೆ ಫುಟ್ಪಾತ್‌ ಬಿಡದಿದ್ದರೆ ಜೆಸಿಬಿ ಬರಲಿದೆ
ಮಲ್ಲಟ ಜೆಸ್ಕಾಂ ಉಪ ಕಚೇರಿಗೆ ಬೆಂಕಿ: ಸಿಬ್ಬಂದಿಗೆ ಹಲ್ಲೆ, ದೂರು