ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Jan 30, 2026, 01:15 AM IST
29ಶಿರಾ2: ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಹೆಂದೊರೆ ಗ್ರಾಮದಲ್ಲಿ ಸರಕಾರಿ ಶಾಲೆ ಮತ್ತು ದೇವಸ್ಥಾನದ ಅಕ್ಕಪಕ್ಕದ ಸುಮಾರು ಕಡೆ ಅಂಗಡಿಗಳಲ್ಲಿ ಮತ್ತು ವಾಸದ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅಕ್ರ ಮದ್ಯ ಮಾರಾಟ ಮಾಡುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಕೆ ಆರ್ ಎಸ್ ಪಕ್ಷದ ಎಸ್ಸಿ/ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹರಾಜು ಸಿ ಎನ್ ಒತ್ತಾಯಿಸಿದರು. | Kannada Prabha

ಸಾರಾಂಶ

ತಾಲೂಕಿನ ಗೌಡಗೆರೆ ಹೋಬಳಿ ಹೆಂದೊರೆ ಗ್ರಾಮದಲ್ಲಿ ಸರಕಾರಿ ಶಾಲೆ ಮತ್ತು ದೇವಸ್ಥಾನದ ಅಕ್ಕಪಕ್ಕದ ಸುಮಾರು ಕಡೆ ಅಂಗಡಿಗಳಲ್ಲಿ ಮತ್ತು ವಾಸದ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕೆಆರ್ ಎಸ್ ಪಕ್ಷದ ನರಸಿಂಹರಾಜು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ತಾಲೂಕಿನ ಗೌಡಗೆರೆ ಹೋಬಳಿ ಹೆಂದೊರೆ ಗ್ರಾಮದಲ್ಲಿ ಸರಕಾರಿ ಶಾಲೆ ಮತ್ತು ದೇವಸ್ಥಾನದ ಅಕ್ಕಪಕ್ಕದ ಸುಮಾರು ಕಡೆ ಅಂಗಡಿಗಳಲ್ಲಿ ಮತ್ತು ವಾಸದ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕೆಆರ್ ಎಸ್ ಪಕ್ಷದ ನರಸಿಂಹರಾಜು ಒತ್ತಾಯಿಸಿದರು.

ಅವರು ನಗರದ ಮಿನಿವಿಧಾನಸೌಧದಲ್ಲಿ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿ ಮಾತನಾಡಿದರು. ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿ ದಿನನಿತ್ಯ ಗಲಾಟೆಗಳಾಗಿ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಾರ್ವಜನಿಕರಿಗೂ ತುಂಬಾ ತೊಂದರೆಯಾಗುತ್ತಿದೆ. ೧೮ ಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು ಕೂಡ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಶಿರಾ ವಲಯದ ಅಬಕಾರಿ ನಿರೀಕ್ಷಕರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ವಿರುದ್ಧ ಕಾನೂನೂ ರೀತಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್, ನಟರಾಜು ಜಿ ಬಿ, ಹೆಂದೊರೆ ಗ್ರಾಮದ ಮಹಿಳೆಯರಾದ ಶ್ವೇತ, ಮಮತ, ಜಲಜಾಕ್ಷಿ, ನಿರ್ಮಲ, ಅನಸೂಯಮ್ಮ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ