ಖಾತೆ ಮಾಡಿಕೊಡದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

KannadaprabhaNewsNetwork |  
Published : Oct 07, 2025, 01:02 AM IST
ಅರಣ್ಯ ಹಕ್ಕು ಕಾಯ್ದೆಯಡಿ ನೀಡಲಾದ ಹಕ್ಕು ಪತ್ರಗಳಿಗೆ ಪಹಣಿ ಕಲಂ ನಂಬರ್ 11 ರಲ್ಲಿ ಖಾತೆ ಮಾಡಿಕೊಡಲು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ತಹಸಿಲ್ದಾರ್ ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ಜಿಲ್ಲಾಧಿಕಾರಿಗಳ ಸ್ಪಷ್ಟ ಲಿಖಿತ ಆದೇಶವಿದ್ದರೂ ಸಹ ಅರಣ್ಯ ಹಕ್ಕು ಕಾಯ್ದೆಯಡಿ ನೀಡಲಾದ ಹಕ್ಕು ಪತ್ರಗಳಿಗೆ ಪಹಣಿ ಕಲಂ ನಂ.11 ರಡಿ ಖಾತೆ ಮಾಡಿಕೊಡಲು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಜಿಲ್ಲಾಧಿಕಾರಿಗಳ ಸ್ಪಷ್ಟ ಲಿಖಿತ ಆದೇಶವಿದ್ದರೂ ಸಹ ಅರಣ್ಯ ಹಕ್ಕು ಕಾಯ್ದೆಯಡಿ ನೀಡಲಾದ ಹಕ್ಕು ಪತ್ರಗಳಿಗೆ ಪಹಣಿ ಕಲಂ ನಂ.11 ರಡಿ ಖಾತೆ ಮಾಡಿಕೊಡಲು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ತಾ.ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಎಚ್ ಹನುಮಂತಪ್ಪ ಮಾತನಾಡಿ, ತಾಲೂಕಿನಲ್ಲಿ 2016-17 ರಲ್ಲಿ 613 ಪರಿಶಿಷ್ಟ ಪಂಗಡದ ರೈತರಿಗೆ ಅರಣ್ಯ ಕಾಯ್ದೆಯಡಿ ಹಕ್ಕು ಪತ್ರ ನೀಡಲಾಗಿದ್ದು, ಇವುಗಳಲ್ಲಿ 244ಕ್ಕೂ ಅಧಿಕ ಹಕ್ಕು ಪತ್ರಗಳ ಪಹಣಿ ಕಲಂ 11 ರಲ್ಲಿ ಖಾತೆ ಮಾಡಿಕೊಡಲು ಹಲವು ಬಾರಿ ತಹಸೀಲ್ದಾರ್ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಎಸಿ ಕಚೇರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಿದ್ದರೂ ಇಲ್ಲಿಯವರೆಗೂ ಖಾತೆ ಮಾಡಿರುವುದಿಲ್ಲ ಎಂದು ದೂರಿದರು.

ಜಿಲ್ಲಾಧಿಕಾರಿಗಳು ಪಹಣಿ ದಾಖಲು CR 07/25-26 ರಂತೆ ಪೂರಕವಾಗಿ ಪಹಣಿ ಕಲಂ 11 ರಲ್ಲಿ ಖಾತೆ ಮಾಡಿಕೊಡಲು ಹಾಗೂ ಮರು ವಂಶ ಬದಲಾಗಿ ಮರಣ ಹೊಂದಿದ ನಂತರದಲ್ಲಿ ಪತಿ ಅಥವಾ ಪತ್ನಿ ಅವಲಂಬಿತರಿಗೆ ಖಾತೆ ಮಾಡಿಕೊಡಲು ಸ್ವಷ್ಟ ಆದೇಶವಾಗಿದೆ ಎಂದ ಅವರು, ಈ ಬಗ್ಗೆ ಹಲವು ಬಾರಿ ಫಲಾನುಭವಿಗಳು ಅಧಿಕಾರಿಗಳ ಗಮನಕ್ಕೆ ತಂದರೂ ಸಂಬಂಧಿಸಿದ ತಾಲೂಕು ಕಚೇರಿ ಅಧಿಕಾರಿಗಳು ಖಾತೆ ಮಾಡಿಕೊಡದೆ ಸತಾಯಿಸುವ ಮೂಲಕ ಕರ್ತವ್ಯಲೋಪ ಎಸಗಿದ್ದು, ಈ ಕೂಡಲೇ ಅಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಂಡು ಪಹಣಿ ಕಲಂ 11 ರಡಿ ಖಾತೆ ಮಾಡಿಕೊಡುವ ಮೂಲಕ ಅರ್ಹರ ಬದುಕಿಗೆ ಭದ್ರತೆಯನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ನಂತರದಲ್ಲಿ ಕೂಡಲೇ ಫಲಾನುಭವಿಗಳಿಗೆ ಖಾತೆ ಮಾಡಿಕೊಡುವಂತೆ ಒತ್ತಾಯಿಸಿ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಗೌರವಾಧ್ಯಕ್ಷ ಹೊಳಿಯಪ್ಪ ತಡಗಣಿ, ಕಾರ್ಯದರ್ಶಿ ಸುರೇಶ್, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಲೋಕೇಶ್‌ ಕಲ್ಮನೆ, ವೀರೇಶ್, ಉಮೇಶ್, ನಾಗರಾಜಗೌಡ, ರಂಗಪ್ಪ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ರೈತಾಪಿ ವರ್ಗದವರು ಹಾಜರಿದ್ದರು.

PREV

Recommended Stories

ಸಮೀಕ್ಷೆ ವೇಳೆ ಬೀದಿ ನಾಯಿ ದಾಳಿಯಿಂದ ಶಿಕ್ಷಕಿ ಗಂಭೀರ
ಸೆಂಟ್ ಸ್ಪ್ರೇ ಮಾಡಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕ