ಸಚಿವರ ಹೇಳಿಕೆ ತಿರುಚಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Jul 24, 2025, 12:45 AM IST
ಪೋಟೊ: 23ಎಸ್‌ಎಂಜಿಕೆಪಿ04ಸಿಗಂದೂರು ದೇವಸ್ಥಾನ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಹೇಳಿಕೆಯನ್ನೇ ತಿರುಚಿ ಸೋಶಿಯಲ್ ಮೀಡಿಯಾಗಳಲ್ಲಿ ಅವಮಾನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಸಿಗಂದೂರುದೇವಿ ಭಕ್ತ ಮಂಡಳಿ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಸಿಗಂದೂರು ದೇವಸ್ಥಾನ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಹೇಳಿಕೆಯನ್ನೇ ತಿರುಚಿ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮುದಾಯದ ನಡುವೆ ಸಂಘರ್ಷ ಸೃಷ್ಟಿಸುವ ಮತ್ತು ಸಚಿವರನ್ನು ಸೋಶಿಯಲ್ ಮೀಡಿಯಾಗಳಲ್ಲಿ ಅವಮಾನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಸಿಗಂದೂರು ದೇವಿ ಭಕ್ತ ಮಂಡಳಿ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಿಗಂದೂರು ದೇವಸ್ಥಾನ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಹೇಳಿಕೆಯನ್ನೇ ತಿರುಚಿ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮುದಾಯದ ನಡುವೆ ಸಂಘರ್ಷ ಸೃಷ್ಟಿಸುವ ಮತ್ತು ಸಚಿವರನ್ನು ಸೋಶಿಯಲ್ ಮೀಡಿಯಾಗಳಲ್ಲಿ ಅವಮಾನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಸಿಗಂದೂರು ದೇವಿ ಭಕ್ತ ಮಂಡಳಿ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಗಂದೂರು ದೇವಸ್ಥಾನವನ್ನು ಯಾರು ಹಾಳು ಮಾಡಲು ಪ್ರಯತ್ನಿಸಿದರು ಎಂಬುದನ್ನು ಒಂದು ತಿಂಗಳಲ್ಲಿ ಹೇಳುತ್ತೇನೆ ಎಂದು ನೀಡಿದ ಹೇಳಿಕೆಯನ್ನು ಬಿಜೆಪಿಯ ಸೋಶಿಯಲ್ ಮೀಡಿಯಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಅರ್ದಕ್ಕೆ ಕತ್ತರಿಸಿ, ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ಎಂಬ 19 ಸೆಕೆಂಡ್ ವಿಡಿಯೋವನ್ನು ಮಾಡಿ ಅದರ ಕೆಳಗಡೆ ಅಜ್ಞಾನಿ ವಿದ್ಯಾ ಮಂತ್ರಿಗಳೇ ಸಿಗಂದೂರು ಚೌಡೇಶ್ವರಿ ಮಾತೆಯ ಮಂದಿರ ಹಾಳು ಮಾಡ್ತೀವಿ ಎಂದ ನಾಲಿಗೆಗೆ ತಾಯಿ ಬರೆ ಹಾಕುವುದು ನಿಶ್ಚಿತ, ಎಂದು ದೇವರ ಚಿತ್ರದೊಂದಿಗೆ ಬರೆದ ವಿಡಿಯೋ ವೈರಲ್ ಮಾಡಿದ್ದು, ಈ ರೀತಿ ಹೇಳಿಕೆಯನ್ನು ತಿರುಚಿರುವುರೊಂದಿಗೆ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸಿ ಮಂತ್ರಿಗಳ ಬಗ್ಗೆ ದ್ವೇಷ ಭಾವನೆ ಮೂಡುವಂತೆ ಪ್ರಚೋದಿಸುವ ಉದ್ದೇಶ ಹೊಂದಿರುವ ಬಿಜೆಪಿ ಕಾರ್ಯಕರ್ತರು ಈ ವಿಡಿಯೋವನ್ನು ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಹಿಂದಿನ ಸರ್ಕಾರ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸಲು ಹುನ್ನಾರ ನೆಡೆಸಿದ್ದನ್ನು ಹಾಗೂ ಆಡಳಿತ ಮಂಡಳಿಗೆ ನೀಡಿದ್ದ ಕಿರುಕುಳ, ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿಸಿರುವುದನ್ನು ಖಂಡಿಸಿ ‘ಶ್ರೀ ಸಿಗಂದೂರು ಕ್ಷೇತ್ರ ಹೋರಾಟ ಸಮಿತಿ ರಚಿಸಿ’ ಮಧು ಬಂಗಾಪ್ಪನವರು ಹಿಂದಿನ ಸರ್ಕಾರಕ್ಕೆ ಎಚ್ಚರಿಕೆಯನ್ನು, ನೀಡಿ ಸಿಗಂದೂರು ದೇವಸ್ಥಾನ ಬಹುಸಂಖ್ಯಾತ ಈಡಿಗ ಸಮಾಜದ ಅಸ್ಮಿತೆ, ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು, ಸರ್ಕಾರ ಮುಜರಾಯಿಗೆ ಸೇರಿಸುವ ಹುನ್ನಾರ ಕೈಬಿಡದಿದ್ದರೆ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಅಂದಿನಿಂದ ಪ್ರತಿಹಂತದಲ್ಲೂ ಶ್ರೀ ಕ್ಷೇತ್ರದ ವಿಷಯವಾಗಿ ಸಲ್ಲದ ಸುಳ್ಳುಸುದ್ದಿ ಹರಡುವ ಕುತಂತ್ರ ರಾಜಕಾರಣ ಮಾಡುತ್ತಿದ್ದು, ಈ ನಕಲಿ ವೀಡಿಯೊ ಸೃಷ್ಠಿ ಇದರ ಭಾಗವಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ.ಡಿ ಮಂಜುನಾಥ್, ಕೆ.ವಿನೋದ್ , ಮಂಜು ಪುರಲೆ, ಕೆ.ಸಿ. ನಾಗರಾಜ್, ಲೋಕೇಶ್, ಉಮೇಶ್, ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಎನ್.ಪಿ. ಧರ್ಮರಾಜ್, ರಾಮಪ್ಪ, ರಾಜಶೇಖರ್, ಕೆ.ಸಿ.ಉಮೇಶ್ , ಎಚ್. ಕಲ್ಲನ, ಕೆ.ವೈ. ರಾಮಚಂದ್ರಪ್ಪ, ಎಂ.ಬಿ. ರಾಜು, ಪರಮೇಶ್ವರಪ್ಪ, ಎ.ಎಂ. ರಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ