ವಿದ್ಯಾರ್ಥಿ ವೇತನ ಸಮರ್ಪಕ ವಿತರಣೆಗೆ ಆಗ್ರಹ

KannadaprabhaNewsNetwork |  
Published : Aug 25, 2024, 01:46 AM IST
ಚಿತ್ರದುರ್ಗ ಪೋಟೋ ಸುದ್ದಿ 333 | Kannada Prabha

ಸಾರಾಂಶ

ನೋಂದಣಿ ಮಾಡಿದ್ದರೂ ವಿದ್ಯಾರ್ಥಿಗಳಿಗೆ ಕಳೆದ 3 ವರ್ಷಗಳಿಂದ ಸಮರ್ಪಕವಾಗಿ ಸ್ಕಾಲರ್ ಶಿಫ್ ಬಾರದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಲು ಮುಂದಾಗೇಕು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿದ್ಯಾರ್ಥಿ ನಿಲಯ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ಸಮರ್ಪಕಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈಗಾಗಲೇ ರಾಜ್ಯದಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಅಲ್ಲದೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಗಿದು ತರಗತಿಗಳು ಪ್ರಾರಂಭವಾಗಿವೆ. ಹೀಗಿದ್ದರೂ ಕೂಡ ಇನ್ನೂ ಸಹಿತ ಹಾಸ್ಟೆಲ್ ಪ್ರವೇಶಾತಿಗಳು ಪ್ರಾರಂಭ ಆಗದೇ ಇರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಕೂಡಲೇ ಹಾಸ್ಟೆಲ್ ಪ್ರವೇಶಾತಿ ಆರಂಭಿಸಬೇಕು. ಉಪನ್ಯಾಸಕರ ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ನೋಂದಣಿ ಮಾಡಿದ್ದರೂ ವಿದ್ಯಾರ್ಥಿಗಳಿಗೆ ಕಳೆದ 3 ವರ್ಷಗಳಿಂದ ಸಮರ್ಪಕವಾಗಿ ಸ್ಕಾಲರ್ ಶಿಫ್ ಬಾರದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಲು ಮುಂದಾಗೇಕು. ಇಲ್ಲದಿದ್ದರೆ ರಾಜ್ಯಪ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ. ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ಸಾಮಾಜಿಕ ಜಾಲತಾಣ ಚಿತ್ರಸ್ವಾಮಿ, ಕಾರ್ಯಕರ್ತರಾದ ದಯಾನಂದ್, ಮನೋಜ್, ಚರಣ್, ನಂದೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ