ತಾಲೂಕಿನ ಹೆಸರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಪಂ ವ್ಯಾಪ್ತಿಯ ರೈತರು ತಹಶೀಲ್ದಾರಗೆ ಮನವಿ ಸಲ್ಲಿಸಿದ್ದಾರೆ.
ತಹಶೀಲ್ದಾರಗೆ ಹೆಸರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಮನವಿ
ಕನ್ನಡಪ್ರಭ ವಾರ್ತೆ ಮುಂಡರಗಿ
ತಾಲೂಕಿನ ಹೆಸರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಪಂ ವ್ಯಾಪ್ತಿಯ ರೈತರು ತಹಶೀಲ್ದಾರಗೆ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ 7 ಗಂಟೆ ವಿದ್ಯುತ್ ಪೂರೈಕೆಯಾಗುತ್ತಿತ್ತು. ಆದರೆ, ಸೆ. 16ರಿಂದ ಕೆಇಬಿ ಅಧಿಕಾರಿಗಳು ರೈತರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ವಿದ್ಯುತ್ ಪೂರೈಕೆಯನ್ನು ಕೇವಲ 5 ಗಂಟೆಗೆ ಕಡಿತಗೊಳಿಸಿದ್ದಾರೆ. ಪ್ರಸ್ತುತ ಮಳೆ ಕೊರತೆಯಿಂದಾಗಿ ತಾಲೂಕನ್ನು ಬರಗಾಲ ಪೀಡಿತ ಎಂದು ಘೋಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ದಿನಕ್ಕೆ ಕೇವಲ 5 ಗಂಟೆ ವಿದ್ಯುತ್ ನೀಡುತ್ತಿರುವುದರಿಂದ ಬೆಳೆಗಳಿಗೆ ನೀರು ಹಾಯಿಸಲು ಸಾಕಾಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಕಡಿತದಿಂದ ಬೆಳೆಗಳು ಒಣಗುವ ಭೀತಿ ಎದುರಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಹಿಂದಿನಂತೆಯೇ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಒದಗಿಸಬೇಕು. ಮುಂದಿನ ಎರಡು ದಿನಗಳ ಒಳಗಾಗಿ ಸಮಸ್ಯೆ ಬಗೆಹರಿಸದಿದ್ದರೆ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ರೈತರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಎಸ್.ವಿ. ಪಾಟೀಲ, ಮಂಜುನಾಥ ವೀರನಗೌಡ ಪಾಟೀಲ, ಸುರೇಶ ಹಲವಾಗಲಿ, ಪರಸರಡ್ಡಿ ಗೊಡಚಿಹಳ್ಳಿ, ಈರಣ್ಣ ಕವಲೂರ, ಪ್ರಕಾಶ ಅಬ್ಬಿಗೇರಿ, ಸೋಮರೆಡ್ಡಿ ಮುದ್ದಾಬಳ್ಳಿ, ಪ್ರವೀಣ ಹಂಚಿನಾಳ, ಮಲ್ಲಪ್ಪ ಹಲವಾಗಲಿ, ಷಣ್ಮುಖ ಹಾಗೂ ಕಕ್ಕೂರ, ಕಕ್ಕೂರತಾಂಡಾ, ನಾಗರಹಳ್ಳಿ, ಹೆಸರೂರ, ರಾಮೇನಹಳ್ಳಿಯ ರೈತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.