ಶ್ರೀಧರಗಡ್ಡೆಯ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಆಗ್ರಹ

KannadaprabhaNewsNetwork |  
Published : Sep 19, 2024, 01:54 AM IST
ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಷ್ಟ್ ಪಕ್ಷದಿಂದ ತಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿ, ಇಒಗೆ ಮನವಿ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ನಿವೇಶನಗಳ ಹಂಚಿಕೆಯಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದೆ.

ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಲು ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದಿಂದ ಇಲ್ಲಿನ ತಾಪಂ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ನಿವೇಶನ ರಹಿತರಿಗೆ ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸರ್ಕಾರ ಈ ಹಿಂದೆ ಆಶ್ರಯ ಯೋಜನೆಯಡಿ 10.36 ಎಕರೆ ಜಾಗ ನಿಗದಿಗೊಳಿಸಿತ್ತು. 24 ವರ್ಷಗಳಾದರೂ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಫಲಾನುಭವಿಗಳ ಪಟ್ಟಿಯನ್ನು ಕೂಡ ತಯಾರು ಮಾಡಲಾಗಿದ್ದರೂ ನಿವೇಶನ ಹಂಚಿಕೆಗಳನ್ನು ವಿಳಂಬ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪಕ್ಷದ ಕಾರ್ಯದರ್ಶಿ ಎ.ದೇವದಾಸ್ ಮಾತನಾಡಿ, ನಿವೇಶನಗಳ ಹಂಚಿಕೆಯಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಂಡು ನಿರಾಶ್ರಿತರ ಅನುಕೂಲಕ್ಕೆ ಮುಂದಾಗಬೇಕು. ಈಗಾಗಲೇ ಸಿದ್ಧಪಡಿಸಲಾಗಿರುವ ಪಟ್ಟಿಯಂತೆಯೇ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ಮಡಗಿನ ಬಸಪ್ಪ, ಶೀಘ್ರದಲ್ಲೇ ನಿವೇಶನ ರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಸಂಬಂಧ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಈರಣ್ಣ, ಈ.ಹನುಮಂತಪ್ಪ, ಗ್ರಾಮಸ್ಥರಾದ ಬಾಬು, ಮೇದಾರ್ ಬಸಮ್ಮ, ನಾಗಮ್ಮ, ಯಶೋದಾ, ಗಂಗಮ್ಮ, ವೀಣಾ, ಶಿವಕುಮಾರಿ, ವಿಜಯಲಕ್ಷ್ಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಮತ್ತು ಇತರರು ಭಾಗವಹಿಸಿದ್ದರು.

ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದಿಂದ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿ, ಇಒಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಹುದ್ದೆಯಲ್ಲಿ ಇರು ಅಂತ ಹೈಕಮಾಂಡ್‌ ಹೇಳಿದ್ರೆ ಇರ್‍ತೀನಿ, ಬಿಡು ಅಂದ್ರೆ ಬಿಡ್ತೀನಿ: ಸಿದ್ದರಾಮಯ್ಯ
ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ