ಕನ್ನಡಪ್ರಭ ವಾರ್ತೆ ಹಾಸನ
ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಶ್ರೀರಾಮಸೇನೆಯಿಂದ ಸೋಮವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು.ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಪ್ರಸ್ತುತದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ನೈಜ ಪೊಲೀಸ್ ಅಧಿಕಾರಿ ಯಾರು ಇದ್ದಾರೆ ಎಂಬುದನ್ನು ನೀವೇ ತಿಳಿಸಬೇಕಾಗಿದೆ. ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲೂಕು ಇಂಗಳಿ ಗ್ರಾಮದಲ್ಲಿ ಗೋ ಹಂತಕರು ಸಾಗಿಸುತ್ತಿದ್ದ ಹಸುಗಳ ವಾಹನ ತಡೆದು ರಕ್ಷಣೆಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಮಾಡಿದ್ದಾರೆ. ಕಸಾಯಿಖಾನೆಗೆ ಹೋಗುತ್ತಿದ್ದನ್ನು ಪೊಲೀಸರಿಗೆ ಒಪ್ಪಿಸಿದ ನಂತರ ಮುಸ್ಲಿಂ ಜಿಹಾದಿಗಳು ಗ್ರಾಮಕ್ಕೆ ಬಂದಿದ್ದು, ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದರು.
ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆಗೆ ಹೋದ ೪ ಗೋಗಳ ಭಕ್ತರನ್ನು ಗ್ರಾಮದ ಕೆಲವು ಮತಾಂಧ ಮುಸ್ಲಿಂ ಗುಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ್ದು ಅತ್ಯಂತ ನಾಚಿಕೆಗೆಡಿನ ವಿಚಾರ. ನಾಗರಿಕ ಸಮಾಜ ತಲೆತಗ್ಗಿಸುವಂತ ಹೇಯಕೃತ್ಯವಾಗಿದ್ದು, ತಕ್ಷಣವೇ ಆ ಮತಾಂಧರನ್ನು ಬಂಧಿಸಿ ಉಗ್ರ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ. ಇಲ್ಲದಿದ್ದರೆ ಹಿಂದೂ ಸಂಘಟನೆಗಳು, ಗೋವುಗಳ ಭಕ್ತರು ಅದೇ ಗ್ರಾಮಕ್ಕೆ ಹೋಗಿ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಎಚ್ಚರಿಸಿದರು.ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಅಧಿಕಾರಿಗಳಿಗೂ ಕೂಡ ಗೊತ್ತಿಲ್ಲವೇ, ಗೋ ರಕ್ಷಣೆ ಮಾಡುವವರಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಗಡಿಪಾರು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರು ಸರಿಯಾದ ಮಾರ್ಗದರ್ಶನ ನೀಡದಿದ್ದರೇ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಕೆ.ಕೆ. ಪುನೀತ್ ಕಾಳೇನಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮಂಗಳೂರು, ಜಿಲ್ಲಾ ಕಾರ್ಯದರ್ಶಿ ಧರ್ಮನಾಯಕ್, ವಿನಯ್ ಇತರರು ಉಪಸ್ಥಿತರಿದ್ದರು.