ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೇರಿ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಗುರುವಾರ ಮನವಿ ನೀಡಿದರು.
ಗಜೇಂದ್ರಗಡ: ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೇರಿ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಗುರುವಾರ ಮನವಿ ನೀಡಿದರು.
ಸಂಘಟನೆಯ ಮುಖಂಡರಾದ ಭೀಮಣ್ಣ ಇಂಗಳೆ ಹಾಗೂ ಶಾಮೀದ ಮಾಲ್ದಾರ್ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುತ್ತದೆ ಎನ್ನುತ್ತದೆ. ಆದರೆ ಕೆಲ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸಲು ಮೀನಮೇಷ ಮಾಡುತ್ತಿದೆ. ಪರಿಣಾಮ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೇರಿ ಗ್ರಾಮಕ್ಕೆ ಬಸ್ ನಿಲುಗಡೆಯಾದ್ದರಿಂದ ಅಲ್ಲಿನ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳಲು ಕಾಲ್ನಡಿಗೆ ಅನಿವಾರ್ಯವಾಗಿದೆ. ಇತ್ತ ರೈತಾಪಿ ಜನ ಹೆಚ್ಚಾಗಿರುವ ಗೌಡಗೇರಿ ಗ್ರಾಮಕ್ಕೆ ಬಸ್ ನಿಲ್ಲದ ಪರಿಣಾಮ ರೈತರು ಹಾಗೂ ಜನರು ಪರದಾಡುವಂತಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಟ್ಟಣದ ಸಾರಿಗೆ ಘಟಕವು ಗೌಡಗೇರಿ ಗ್ರಾಮಕ್ಕೆ ಬಸ್ ನಿಲುಗಡೆಯಾಗದಿದ್ದರೆ ಗ್ರಾಮಸ್ಥರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಸಾರಿಗೆ ಘಟಕದ ವ್ಯವಸ್ಥಾಪಕ ರಾಘವೇಂದ್ರ ಬುದಾಪೂರ ನಮ್ಮ ಸೇನೆಯ ಸಂಘಟನೆ ಕಾರ್ಯಕರ್ತರು ನೀಡಿದ ಮನವಿ ಸ್ವೀಕರಿಸಿದರು.ಈ ವೇಳೆ ರಾಜು ಮಾಳಿತ್ತರ, ಯಮನೂರ ಗೌಡ್ರ, ಕಳಕೇಶ ರಾಠೋಡ, ಪ್ರಕಾಶ ಇಂಗಳೆ, ಚಂದ್ರಪ್ಪ ಜಾನಾಯಿ, ಶರಣಪ್ಪ ರಾಠೋಡ, ನಿಂಗೇಶ ಪೂಜಾರ, ವಿರೇಶ ಶಿವಸಿಂಪಗೇರ ಸೇರಿ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.