ಎಲ್‌ಪಿಜಿ ಗ್ಯಾಸ್ ಬಂಕ್‌ಗಳ ಎನ್‌ಒಸಿ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Oct 16, 2026, 02:15 AM IST
ರಾಣಿಬೆನ್ನೂರು ನಗರದಲ್ಲಿನ ಎಲ್‌ಪಿಜಿ ಗ್ಯಾಸ್ ಬಂಕ್‌ಗಳಲ್ಲಿ ಮೂಲಸೌಕರ್ಯಗಳನ್ನ ಕಲ್ಪಿಸುವಂತೆ ಒತ್ತಾಯಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ರಾಣಿಬೆನ್ನೂರು ನಗರದಲ್ಲಿನ ಎಲ್‌ಪಿಜಿ ಗ್ಯಾಸ್ ಬಂಕ್‌ಗಳಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಆಟೋ ಚಾಲಕರು ಗುರುವಾರ ಪ್ರತಿಭಟನೆ ನಡೆಸಿದರು.

ರಾಣಿಬೆನ್ನೂರು: ನಗರದಲ್ಲಿನ ಎಲ್‌ಪಿಜಿ ಗ್ಯಾಸ್ ಬಂಕ್‌ಗಳಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಆಟೋ ಚಾಲಕರು ಗುರುವಾರ ಪ್ರತಿಭಟನೆ ನಡೆಸಿದರು.

ಈ ಸಮಯದಲ್ಲಿ ತಾಲೂಕು ಆಟೋ ಚಾಲಕರ ಒಕ್ಕೂಟದ ಗೌರವ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಮಾತನಾಡಿ, ನಗರದಲ್ಲಿ ಪ್ರತಿ ದಿನ 2500 ಆಟೋಗಳು ಸಂಚರಿಸುತ್ತವೆ. ನಗರದಲ್ಲಿ 3 ಎಲ್‌ಪಿಜಿ ಬಂಕುಗಳಿದ್ದು ಆಟೋ ರಿಕ್ಷಾಗಳು ಅವುಗಳಲ್ಲಿಯೇ ಗ್ಯಾಸ್ ಹಾಕಿಸುತ್ತಾರೆ. ಆದರೆ ಅವುಗಳಲ್ಲಿ ಏರ್ ಬಂಕ್, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಹಾಗೂ ಇತರೆ ಮೂಲಸೌಕರ್ಯಗಳಿಲ್ಲವಾಗಿದೆ. ಹೀಗಾಗಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಗ್ಯಾಸ್ ಬಂಕಗಳ ಪರವಾನಿಗೆಯನ್ನ ರದ್ದುಗೊಳಿಸಬೇಕು. ಆರು ತಿಂಗಳ ಹಿಂದೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಸ್ಯೆಗಳ ಕುರಿತು ಗ್ಯಾಸ್ ಬಂಕ್ ಮಾಲೀಕರು, ಆಟೋ ಚಾಲಕರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದು ಮಾಲೀಕರ ಕರ್ತವ್ಯವಾಗಿದೆ. ನಿಯಮಗಳನ್ನ ಪಾಲಿಸದಿದ್ದಲ್ಲಿ ಅನುಮತಿ ರದ್ದುಗೊಳಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದರು. ಆದರೆ ಇದುವರೆಗೂ ಆದೇಶ ಪಾಲನೆಯಾಗದ ಕಾರಣ ಪ್ರತಿಭಟನೆ ನೆಡೆಸುವುದು ಅನಿವಾರ್ಯವಾಗಿದೆ ಎಂದರು.

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಆಹಾರ ಇಲಾಖೆಯ ನಿರೀಕ್ಷಕ ಸ್ಟಿವನ್ ಬಂಕ್ ಮಾಲೀಕರೊಂದಿಗೆ ಚರ್ಚೆ ನಡೆಸಿ 15 ದಿನಗಳಲ್ಲಿ ಗ್ರಾಹಕರಿಗೆ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿದರು.

ಆಟೋ ಚಾಲಕ ಒಕ್ಕೂಟದ ಅಧ್ಯಕ್ಷ ಜಗದೀಶ ಕೆರೊಡಿ, ನಾಗರಾಜ ಹಾರೋಗೊಪ್ಪ, ವೀರೇಶ ಬಳ್ಳಾರಿ, ಹರಿಹರಗೌಡ ಪಾಟೀಲ, ಕೊಟ್ರೇಶ್, ಮಲಕಪ್ಪ, ಎಲ್ಲಪ್ಪ ಓಲೇಕಾರ, ಜಮಾಲಸಾಬ್ ಶೇತಸನದಿ, ಅನಿಲ ಮುಷ್ಟೂರು ನಾಯಕ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಗಮಾಸ್ತಿ ಕ್ಷೇತ್ರದ ಮಹಿಳಾ ದಸರಾ ಜಿಲ್ಲೆಗೆ ಮಾದರಿ
ಅಗ್ನಿವೀರರಾಗಲು ಇಟಗಿಯಲ್ಲಿ ಉಚಿತ ತರಬೇತಿ ಶಿಬಿರ