ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಮೀಸಲಿಡಲು ಅಗ್ರಹ

KannadaprabhaNewsNetwork |  
Published : Dec 09, 2024, 12:46 AM IST
ಕ್ಯಾಪ್ಷನ6ಕೆಡಿವಿಜಿ50 ದಾವಣಗೆರೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ  ವತಿಯಿಂದ ಜಿಲ್ಲಾಡಳಿತ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಒಂದು ಕುಟುಂಬಕ್ಕೆ ನೂರು ದಿನಗಳ ಬದಲಿಗೆ 200 ದಿನಗಳ ಕೆಲಸ ಖಾತ್ರಿಗೊಳಿಸಬೇಕು, ಕೆಲಸ ಮಾಡುವಾಗ ಕಾರ್ಮಿಕರು ಮರಣ ಹೊಂದಿದರೆ 5 ಲಕ್ಷ ರೂ., ಪರಿಹಾರ ನೀಡಬೇಕೆಂದು ಸಂಘಟನೆಯಿಂದ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಅಲ್ಲದೇ, ವಿಧವೆ, ಪತಿಯಿಂದ ದೂರವಿರುವ ಹಾಗೂ ಅವಿವಾಹಿತ ಒಂಟಿ ಮಹಿಳೆಯರಿಗೆ ಪ್ರತ್ಯೇಕವಾಗಿ ರೇಷನ್ ಕಾರ್ಡ ನೀಡಬೇಕು, ದೇಶದಲ್ಲಿ ಅಪೌಷ್ಠಿಕ ಮಕ್ಕಳು ಹಾಗೂ ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ. ಅತಿ ಅಗತ್ಯ ದಿನಸಿ ಸಾಮಗ್ರಿಗಳ ಬೆಲೆ ಗಗನಕ್ಕೆ ಏರಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅದನ್ನು ಕೊಂಡಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಸರಕಾರ ರಾಗಿ, ಜೋಳ, ತೊಗರಿ ಬೆಳೆ ಹಾಗೂ ಎಣ್ಣೆ, ನ್ಯಾಯಬೆಲೆ ಅಂಗಡಿಯ ಮೂಲಕ ವಿತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಹೊಸ ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ಹಾಗೂ ಅರ್ಜಿ ಸಲ್ಲಿಸಿ ವರ್ಷಗಳು ಕಳೆದರು ರೇಷನ ಕಾರ್ಡ ದೊರೆಯುತ್ತಿಲ್ಲ. ನಿಜವಾದ ಬಡವರು ತೊಂದರೆ ಅನುಭವಿಸುತ್ತಿದ್ದಾರೆ ಆದ್ದರಿಂದ ತಕ್ಷಣ ಅರ್ಜಿ ಸಲ್ಲಿಸಿದ ಕುಟುಂಬಗಳಿಗೆ ಕಾರ್ಡ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಪಿ.ಎಸ್. ಸುಧಾ, ಕೆ.ಎಸ್. ಶಶಿಕಲಾ, ನಾಗಮ್ಮ, ದುರುಗಮ್ಮ, ರತ್ನಮ್ಮ, ಬಸಣ್ಣ, ನಾಗರಾಜ್, ಹನುಮಂತಪ್ಪ, ರಾಜ, ಪರಶುರಾಮಪ್ಪ, ಗೀತಾ, ನಾಗರತ್ನ, ಮಂಜುಳಮ್ಮ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ