ಗಂಗಾವತಿಯಲ್ಲಿ ಅನಧಿಕೃತ ಮದ್ಯ ಮಾರಾಟ, ಕಡಿವಾಣಕ್ಕೆ ಆಗ್ರಹ

KannadaprabhaNewsNetwork |  
Published : Oct 13, 2026, 02:30 AM IST
ಗಂಗಾವತಿ ನಗರದ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಸಭಾಂಗಣದಲ್ಲಿ ಜರುಗಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಡಿವೈಎಸ್ಪಿ ಜಾಯಪ್ಪ ನ್ಯಾಮಗೌಡ ಮಾತನಾಡಿದರು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಗಂಗಾವತಿ ಉಪವಿಭಾಗದ ವತಿಯಿಂದ ಸೋಮವಾರ ಗಂಗಾವತಿಯ ಐಎಂಎ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ ನಡೆಯಿತು.

ಗಂಗಾವತಿ: ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದು, ಕೂಡಲೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದರು.

ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಗಂಗಾವತಿ ಉಪವಿಭಾಗದ ವತಿಯಿಂದ ಸೋಮವಾರ ನಗರದ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು. ಕಾನೂನುಬಾಹಿರ ಚಟುವಟಿಕೆ ನಗರದಲ್ಲಿ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಹಲವಾರು ಬಾರಿ ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯವರ ಗಮನಕ್ಕೆ ತಂದರೂ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಗಂಗಾವತಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಕಾಶ ಯಾತನೂರು, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ರಂಗಪ್ಪ ಆರ್. ದೊಡ್ಡಮನಿ, ಕನಕಗಿರಿ ಪೊಲೀಸ್ ಠಾಣೆಯ ಸಿಪಿಐ ಶಿವರಾಜ ಇಂಗಳೆ, ಕಾರಟಗಿ ಪೊಲೀಸ್ ಇನ್‌ಸ್ಪೆಕ್ಟರ್ ಸುಧೀರ್ ಬೆಂಕಿ, ಕುಷ್ಟಗಿ ಪಿಎಸ್‌ಐ ಹನುಮಂತಪ್ಪ ತಳವಾರ, ಹನುಮಸಾಗರ ಪಿಎಸ್‌ಐ ಧನಂಜಯ ಎಂ. ಹಾಗೂ ತಾವರಗೇರಿ ಪಿಎಸ್‌ಐ ಚಂದ್ರಪ್ಪ ಎಚ್. ಉಪಸ್ಥಿತರಿದ್ದರು.

ಮುಖಂಡರಾದ ಜೋಗದ ನಾರಾಯಣಪ್ಪ ನಾಯಕ, ಜೋಗದ ಹನುಮಂತಪ್ಪ ನಾಯಕ, ದಳಪತಿ ದುರಗಪ್ಪ ನಾಯಕ, ಹಂಚಿನಾಳ ಹುಸೇನೆಪ್ಪ ವಕೀಲರು, ದುರಗಪ್ಪ ನಾಯಕ, ಹುಲ್ಲೇಶ ದೇವರಮನಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜಗೋಳಿ ಪಿಯು ಕಾಲೇಜಲ್ಲಿ ಆಳ್ವಾಸ್ ಎನ್‌ಎಸ್‌ಎಸ್‌ ಶಿಬಿರ ಆರಂಭ
ಸ್ಟಾರ್ಟಪ್ ಯೋಜನೆಗಳತ್ತ ಗಮನ ಹರಿಸಿ: ಡಾ. ರಂಗಸ್ವಾಮಿ