ಬಲಗೈ ಸಮುದಾಯಕ್ಕೆ ಡಿಸಿಎಂ- ೫ ಸಚಿವ ಸ್ಥಾನಕ್ಕೆ ಆಗ್ರಹ

KannadaprabhaNewsNetwork |  
Published : Jun 03, 2026, 01:30 AM IST
೨ಕೆಎಂಎನ್‌ಡಿ-೪ನೂತನ ಸರ್ಕಾರದಲ್ಲಿ ಬಲಗೈ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಐದು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಜ್ಯ ಬಲಗೈ ಜಾತಿಗಳ ಒಕ್ಕೂಟದವರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚಾಗಿ ಬಲಗೈ ಸಮುದಾಯ ಬೆಂಬಲಿಸುತ್ತಿದೆ. ದಲಿತ ಸಿಎಂ ಕೊಡ್ತೇವೆ ಎಂದು ಹೇಳಿ ಕಾಂಗ್ರೆಸ್ ಪಕ್ಷ ಮಾತಿಗೆ ತಪ್ಪಿದೆ. ಅದಕ್ಕಾಗಿ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ೫ರಿಂದ ೭ ಸಚಿವ ಸ್ಥಾನ ನೀಡಬೇಕು. ಕಾಂಗ್ರೆಸ್ ಗೆಲ್ಲಲು ಬಲಗೈ ಸಮುದಾಯ ಪ್ರಮುಖ ಪಾತ್ರ ವಹಿಸಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯದಲ್ಲಿ ನೂತನವಾಗಿ ರಚನೆಯಾಗಲಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಬಲಗೈ ಸಮುದಾಯಕ್ಕೆ ಒಂದು ಡಿಸಿಎಂ ಹಾಗೂ ಐದು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಬಲಗೈ ಜಾತಿಗಳ ಒಕ್ಕೂಟದವರು ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ದಲಿತ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚಾಗಿ ಬಲಗೈ ಸಮುದಾಯ ಬೆಂಬಲಿಸುತ್ತಿದೆ. ದಲಿತ ಸಿಎಂ ಕೊಡ್ತೇವೆ ಎಂದು ಹೇಳಿ ಕಾಂಗ್ರೆಸ್ ಪಕ್ಷ ಮಾತಿಗೆ ತಪ್ಪಿದೆ. ಅದಕ್ಕಾಗಿ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ೫ರಿಂದ ೭ ಸಚಿವ ಸ್ಥಾನ ನೀಡಬೇಕು. ಕಾಂಗ್ರೆಸ್ ಗೆಲ್ಲಲು ಬಲಗೈ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನಮ್ಮ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡ್ತೇವೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೃಷ್ಣ, ಚಂದಗಾಲು ವಿಜಯಕುಮಾರ್, ಬಸವರಾಜು, ಶ್ರೀಧರ್, ಪ್ರೇಮ್‌ಕುಮಾರ್, ಕಬ್ಬಾಳಯ್ಯ, ಪ್ರೊ.ಚಂದ್ರಶೇಖರ್, ದೀಪಕ್, ಲವ, ಕಣಿವೆ ರಾಮು, ಹೊಂಬಯ್ಯ, ಸಿದ್ದರಾಜು, ಗುರುಮೂರ್ತಿ, ಶಿವಪ್ರಕಾಶ್, ಪ್ರಾಣೇಶ್, ಪ್ರಕಾಶ್ ಇತರರಿದ್ದರು.

ಹಿಂದುಳಿದ ನಾಯಕರಿಗೆ ರಾಜಕೀಯ ಸ್ಥಾನ-ಮಾನಕ್ಕೆ ಒತ್ತಾಯ

ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದಲ್ಲಿ ಪ್ರವರ್ಗ-೧ರ ಅಡಿಯಲ್ಲಿನ ನಾಯಕರಿಗೆ ಸಚಿವ ಹಾಗೂ ವಿಧಾನ ಪರಿಷತ್ ಸ್ಥಾನಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪ್ರವರ್ಗ-೧ರ ಜಾತಿಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗರತ್ನ ಒತ್ತಾಯಿಸಿದರು.

ಪ್ರವರ್ಗ-೧ರ ಅಡಿ ೯೫ ಜಾತಿಗಳು, ೩೯೦ಕ್ಕೂ ಹೆಚ್ಚು ಉಪಜಾತಿಗಳಿವೆ. ಅವುಗಳಲ್ಲಿ ಯಾದವ, ಉಪ್ಪಾರ ಹಾಗೂ ಗಂಗಮತಸ್ಥರು ಪ್ರಮುಖರಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಹಿಂದುಳಿದ ಸಮುದಾಯದ ಹೆಚ್ಚು ಜನರು ಕಡುಬಡತನದಿಂದ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದು, ಯಾದವ ಸಮುದಾಯದ ಡಿ.ಟಿ.ಶ್ರೀನಿವಾಸ್, ಹಾಗೂ ಉಪ್ಪಾರ ಸಮುದಾಯದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಹಾಗೂ ಗಂಗಾಮತ ಸಮುದಾಯದ ತಿಮ್ಮಪ್ಪಣ್ಣ ಕುಮಕನೂರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮುಂದುವರೆಸುವಂತೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಲಿಂಗಯ್ಯ, ಉಪಾಧ್ಯಕ್ಷ ಪ್ರಕಾಶ್, ನಿರ್ದೇಶಕ ಸಿದ್ದರಾಜು ಇದ್ದರು.

ವಿಧಾನ ಪರಿಷತ್ ಸ್ಥಾನ ಕಲ್ಪಿಸುವಂತೆ ಸಿ.ಗಾಯತ್ರಿ ಮನವಿ

ಮಂಡ್ಯ: ಗಂಗಾ ಮತ(ಬೆಸ್ತರ) ಸಮುದಾಯದ ಪ್ರಮುಖರಾದ ತಿಪ್ಪಣ್ಣ ಕಮಕನೂರು, ಮಂಜುನಾಥ ಸುಣಗಾರ್ ಹಾಗೂ ಡಾ.ಭಗತ್ ರಾಮ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಬೇಕು ಎಂದು ಮಂಡ್ಯ ಜಿಲ್ಲಾ ಮಹಿಳಾ ಗಂಗಾಮತ(ಬೆಸ್ತರ) ಸಂಘ ಅಧ್ಯಕ್ಷೆ ಸಿ.ಗಾಯತ್ರಿ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಸದಸ್ಯರಾಗಿರುವ ತಿಪ್ಪಣ್ಣ ಕಮಕನೂರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರನ್ನು ಮುಂದುವರಿಸುವ ಜೊತೆಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಅದೇ ರೀತಿ ರಾಜ್ಯ ಮೀನುಗಾರರ ಕಾಂಗ್ರೆಸ್ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾರ ಅವರು ಮೀನುಗಾರರಿಗೆ ಸವಲತ್ತುಗಳನ್ನು ಒದಗಿಸಿಕೊಟ್ಟು ಅವರ ಹಿತ ಚಿಂತನೆ ಕಾಪಾಡುತ್ತಿರುವುದರಿಂದ ಅವರ ಸೇವೆ ಪರಿಗಣಿಸಿ ಪರಿಷತ್ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಚನ್ನಪಟ್ಟಣದ ಮಾಜಿ ಶಾಸಕ ದಿ.ಡಿ.ಟಿ.ರಾಮುರವರ ಪುತ್ರ ವೈದ್ಯ ಡಾ..ಭಗತ್ ರಾಮ್ ಅವರನ್ನು ಸಹ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡರು ಹಾಗೂ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ರೇಣುಕಾ.ಬಿ, ಮದ್ದೂರು ತಾಲೂಕು ಅಧ್ಯಕ್ಷೆ ಆರ್.ವಸಂತ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆ ಮಕ್ಕಳಿಗೆ ಮನ್ಮುಲ್ ಒಕ್ಕೂಟದ ದರ್ಶನ: ಸಿ.ಶಿವಕುಮಾರ್
ರೈತ ಫಲಾನುಭವಿಗಳಿಗೆ ಮನ್ಮುಲ್‌ನಿಂದ ಡಿಜಿಟಲ್ ಪೇಮೆಂಟ್: ಸಿ.ಶಿವಕುಮಾರ್