ಬಸ್ ನಿಲುಗಡೆ ಆದೇಶ ಉಲ್ಲಂಘಿಸುವ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹ

KannadaprabhaNewsNetwork |  
Published : Nov 19, 2025, 01:15 AM IST
ಫೋಟೊ ಶೀರ್ಷಿಕೆ: 18ಆರ್‌ಎನ್‌ಆರ್6ರಾಣಿಬೆನ್ನೂರಿನ ಹಲಗೇರಿ ರಸ್ತೆಯಲ್ಲಿರುವ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಲು ಆದೇಶವನ್ನು ಉಲ್ಲಂಘನೆ ಮಾಡುವ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಾರಿಗೆ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಲು ಆದೇಶವನ್ನು ಉಲ್ಲಂಘನೆ ಮಾಡುವ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹಿಸಿ ಮಂಗಳವಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಾರಿಗೆ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ನಗರದ ಹಲಗೇರಿ ರಸ್ತೆಯಲ್ಲಿರುವ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಲು ಆದೇಶವನ್ನು ಉಲ್ಲಂಘನೆ ಮಾಡುವ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹಿಸಿ ಮಂಗಳವಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಾರಿಗೆ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಬಾಲಕಿಯರ ವಸತಿ ನಿಲಯದಲ್ಲಿ 150ಕ್ಕೂ ಅಧಿಕ ವಿದ್ಯಾರ್ಥಿನಿಯರು ನಗರದ ವಿವಿಧ ಕಾಲೇಜುಗಳಿಗೆ ಪ್ರತಿನಿತ್ಯ ತೆರಳುತ್ತಾರೆ. ಅಧಿಕೃತವಾಗಿ ಕೋರಿಕೆ ನಿಲುಗಡೆಗೆ ಅವಕಾಶವಿದ್ದರೂ ವಿದ್ಯಾರ್ಥಿನಿಯರನ್ನು ನಗರದ ಕೇಂದ್ರ ಬಸ್ ನಿಲ್ದಾಣದಿಂದ ಹತ್ತಿಸಿಕೊಂಡು ವಸತಿ ನಿಲಯಕ್ಕೆ ನಿಲ್ಲಿಸದೆ 8 ಕಿಮೀ ದೂರದ ಹಲಗೇರಿ ಗ್ರಾಮಕ್ಕೆ ಬಿಡುತ್ತಾರೆ. ಇಲ್ಲವೇ ನಡು ರಸ್ತೆಯಲ್ಲಿ ಇಳಿಸಿ ಹೋಗುತ್ತಾರೆ. ಈ ರೀತಿಯ ಅಮಾನವೀಯವಾಗಿ ವಿದ್ಯಾರ್ಥಿನಿಯರನ್ನು ಕೆಲ ಕಂಡಕ್ಟರ್ ಹಾಗೂ ಡ್ರೈವರ್‌ಗಳು ನಡೆಸಿಕೊಳ್ಳುವ ರೀತಿಯನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ.ಪ್ರತಿನಿತ್ಯವೂ ನಿಲ್ಲದ ಬಸ್‌ಗಳ ನಂಬರ್ ಸಮೇತವಾಗಿ ಪೋಟೋ ವಿಡಿಯೋ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಿದರು ಯಾವುದೇ ರೀತಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಅದರಿಂದ ನಿತ್ಯವೂ ಸಮಸ್ಯೆ ಆಗುತ್ತಿದೆ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲು ಹೇಳಿಕೊಂಡರು. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಎಲ್ಲಾ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಬಸ್ ನಿಲ್ದಾಣ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.ಹಾಸ್ಟೆಲ್ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ದ್ರಾಕ್ಷಯಿಣಿ ಎನ್., ನೀಲಾ ಕೆ., ಸುಮಾ ಎನ್, ಸೌಮ್ಯ ಆರ್.ಕೆ., ಅಶ್ವಿನಿ ಎಚ್., ಚೆನ್ನಮ್ಮ ಬಿ.ಆರ್., ಐಶ್ವರ್ಯ, ಹೊನ್ನಮ್ಮ, ಚಂದ್ರಲೇಖ, ರಕ್ಷಿತಾ ಲಮಾಣಿ, ಚಂದ್ರಕಲಾ, ಗೀತಾ, ಜ್ಯೋತಿ, ಮಧುಶ್ರೀ, ಪವಿತ್ರ, ಶೃತಿ, ಶ್ರೀಲೇಖ, ಭೂಮಿಕಾ, ನಯನ, ವೀಣಾ ಡಿ, ಲಕ್ಷ್ಮಿ, ರಂಜಿತ, ರೋಜಾ, ಸ್ಪೂರ್ತಿ, ಸುಪ್ರಿತಾ ಮತ್ತಿತರರಿದ್ದರು.

PREV

Recommended Stories

ಯುವಜನತೆ ತಂಬಾಕು ಸೇವನೆಯಿಂದ ದೂರವಿರಿ
ಪ್ರತ್ಯೇಕ ರಾಜ್ಯಕ್ಕೆ ನನ್ನ ಸಹಮತವಿಲ್ಲ: ಬಸವರಾಜ ಹೊರಟ್ಟಿ