ಕೇಂದ್ರ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹ

KannadaprabhaNewsNetwork |  
Published : Dec 27, 2024, 12:45 AM IST
ಚಿತ್ರ 26ಬಿಡಿಆರ್55 | Kannada Prabha

ಸಾರಾಂಶ

ಔರಾದ್‌ ತಾಲೂಕಿನ ದಾಬಕಾ ಗ್ರಾಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಲು ಆಗ್ರಹಿಸಿ ದಾಬಕಾ ವಲಯ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಮಲನಗರ

ತಾಲೂಕಿನ ದಾಬಕಾ ಗ್ರಾಮದಲ್ಲಿ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ದಾಪಕಾ ವಲಯ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಸಂಸತ್ ಕಲಾಪದಲ್ಲಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಗ್ರಾಮದ ಭವಾನಿ ಮಂದಿರದಿಂದ ನಾಡ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ ದಾಬಕಾ ನಾಡ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದರು.

ಸಮಾಜದ ಮುಖಂಡ ಸುಧಾಕರ್ ಕೊಳ್ಳುರ್ ಮಾತನಾಡಿ, ಅಮಿತ್ ಶಾ ಅವರು ಈ ಕೂಡಲೇ ಕ್ಷಮೆ ಕೇಳಬೇಕು ಮತ್ತು ಬಿಜೆಪಿ ವರಿಷ್ಠರು ಅಮಿತ್ ಶಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ಮುಖಂಡ ಆಕಾಶ್ ಶಿಂದೆ, ಗೋಪಾಲ ಗಾಯಕವಾಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಗ್ರಾಪಂ ಅಧ್ಯಕ್ಷ ಪ್ರದೀಪ್ ಕಾಂಬಳೆ, ತಾಲೂಕು ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಆನಂದ್ ಚವ್ಹಾಣ, ಪ್ರಶಾಂತ್ ಹಟ್ಟೆ, ಅಬ್ರಹಾಂ ಕಾರಂಜಿ, ಅರವಿಂದ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ