- ಗ್ರಾಮ ಪಂಚಾಯಿತಿ ತೋರಿಸಿರುವ ಈ ನಿರ್ಲಕ್ಷ್ಯ ತೀವ್ರ ಖಂಡನೀಯ
ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಪಿಡಬ್ಲ್ಯೂಡಿ ಇಲಾಖೆ ನೇತೃತ್ವದಲ್ಲಿ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ವೇಳೆ ಗ್ರಾಮದ ಮುಖ್ಯ ರಸ್ತೆಯ ಕೆಲ ಮನೆಗಳ ಮುಂಭಾಗದ ಒಳಚರಂಡಿ (ಡ್ರೈನೇಜ್)ಯನ್ನು ಸುಮಾರು ಒಂದು ತಿಂಗಳ ಹಿಂದೆ ಸಂಪೂರ್ಣವಾಗಿ ತೆರವುಗೊಳಿಸಿ ಈವರೆಗೂ ಯಾವುದೇ ದುರಸ್ತಿ ಅಥವಾ ಹೊಸ ಡ್ರೈನೇಜ್ ನಿರ್ಮಾಣ ಕಾರ್ಯ ಕೈಗೊಂಡಿಲ್ಲ ಇದನ್ನು ಕೂಡಲೇ ನಿರ್ಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಡ್ರೈನೇಜ್ ಸಂಪೂರ್ಣವಾಗಿ ಬಂದ್ ಆಗಿ ಮಲಿನ ನೀರು ನಿಂತು ದುರ್ವಾಸನೆ ಹರಡುತ್ತಿದೆ. ಇದರಿಂದ ಗ್ರಾಮಸ್ಥರ ಹಾಗೂ ಮುಖ್ಯ ರಸ್ತೆ ಮೂಲಕ ಸಂಚರಿಸುವ ಸಾರ್ವಜನಿಕರ ಆರೋಗ್ಯ ಸಮಸ್ಯೆ, ಸೊಳ್ಳೆ ಕಾಟ ಮತ್ತು ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ.ಈ ಕುರಿತು ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಸಾರ್ವಜನಿಕರ ಮೂಲಭೂತ ಸೌಲಭ್ಯಗಳ ಬಗ್ಗೆ ಗ್ರಾಮ ಪಂಚಾಯಿತಿ ತೋರಿಸಿರುವ ಈ ನಿರ್ಲಕ್ಷ್ಯ ತೀವ್ರ ಖಂಡನೀಯ ವಾಗಿದೆ.ಕಾಮಗಾರಿ ನಡೆಸಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡಿರುವ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಪಂ ಕುರಿತು ತಕ್ಷಣ ತನಿಖೆ ನಡೆಸಬೇಕು. ಜೊತೆಗೆ ಧ್ವಂಸಗೊಂಡ ಮುಖ್ಯ ರಸ್ತೆ ಡ್ರೈನೇಜ್ ಅನ್ನು ತಕ್ಷಣ ದುರಸ್ತಿ ಮಾಡಿಸಿ ಅಥವಾ ಹೊಸದಾಗಿ ನಿರ್ಮಿಸಬೇಕೆಂದು ಲಕ್ಕವಳ್ಳಿ ಗ್ರಾಮದ ಗ್ರಾಮಸ್ಥರು ಒತ್ತಾಯಿದ್ದಾರೆ.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರ ಆರೋಗ್ಯ ಮತ್ತು ಹಕ್ಕುಗಳನ್ನು ರಕ್ಷಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಲಕ್ಕವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ ರಾಜಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ವಿಜಯಕುಮಾರ್ ಹಾಗೂ ಟಿಎಂ ರಸ್ತೆ ನಿವಾಸಿಗಳು ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.--17ಕೆಟಿಆರ್.ಕೆ.1ಃ ಲಕ್ಕವಳ್ಲಿಯಲ್ಲಿ ದುರಸ್ತಿ ಕಾಣದ ಡ್ರೈನೇಜ್