ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಘೋಷಣೆ ಕೂಗುತ್ತ ಡಾ.ಅಂಬೇಡ್ಕರ್ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.
ಆರೋಗ್ಯ ಅಭಿಯಾನದ ಮುಂಖಂಡರಾದ ಟೀನಾ ಸೇವೂರ್ ಮಾತನಾಡಿ, ಪಿಪಿಪಿ ಮಾದರಿ ತರುತ್ತಿರುವುದನ್ನು ಎಲ್ಲಾ ಜಿಲ್ಲೆಗಳಲ್ಲಿಯೂ ವಿರೋಧಿಸುತ್ತಿದ್ದೇವೆ. ಬಡಮಕ್ಕಳಿಗೆ ಶಿಕ್ಷಣದ ಬಾಗಿಲು ತೆರೆಯುತ್ತದೆಯೇ? ಒಂದು ವೇಳೆ ಖಾಸಗಿಯವರಿಗೆ ವಹಿಸಿಕೊಂಡರೆ ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಖಾಸಗೀಕರಣ ಮಾಡಲು ಅವಕಾಶ ಮಾಡಿಕೊಟ್ಟಂತೆ ಎಂದು ಹೇಳಿದರು.ಹೋರಾಟ ಸಮಿತಿ ಸದಸ್ಯ ಬಿ.ಭಗವಾನ್‌ರೆಡ್ಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ 149 ಎಕರೆಗೂ ಹೆಚ್ಚು ಸ್ಥಳಾವಕಾಶ ಜಿಲ್ಲಾಸ್ಪತ್ರೆ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಸರ್ಕಾರ ಇದನ್ನು ಗುರುತಿಸಿ ಪಿಪಿಪಿ ಮಾದರಿಯನ್ನು ಯಾವ ಕಾರಣಕ್ಕೂ ವಿಜಯಪುರದಲ್ಲಿ ತರಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುನ್ನಡೆಯ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಿರಿಯ ಸಾಹಿತಿ ಸುಭಾಷ ಯಾದವಾಡ ಮಾತನಾಡಿ, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು. ಎಲ್ಲಾ ಮಕ್ಕಳು ಕಡಿಮೆ ಹಣದಿಂದ ವೈದ್ಯಕೀಯ ಶಿಕ್ಷಣ ಪಡೆಯಬಹುದು. ಆದ್ದರಿಂದ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಮೂಲಕ ತಹಸೀಲ್ದಾರಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಅಕ್ರಮ ಮಾಶಾಳಕರ, ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಚಂದ್ರಶೇಖರ ಘಂಟೆಪ್ಪಗೋಳ, ಫಾದರ್ ಕೆವಿನ್, ಮಲ್ಲಿಕಾರ್ಜುನ ಕೆಂಗನಾಳ, ಲಲಿತಾ ಬಿಜ್ಜರಗಿ, ಜಗದೇವ ಸುರ್ಯವಂಶಿ, ಶ್ರೀನಾಥ ಪೂಜಾರಿ, ಬೋಗೇಶ ಸೊಲಾಪುರ, ದಸ್ತಗೀರ ಉಕ್ಕಲಿ, ಶಿವಬಾಳಮ್ಮ ಕೊಂಡಗೂಳಿ, ಗೀತಾ.ಎಚ್, ಕಾವೇರಿ ರಜಪೂತ, ಸಿದ್ದಲಿಂಗ ಬಾಗೇವಾಡಿ, ಸುರೇಖಾ ರಜಪೂತ, ಮಲ್ಲಿಕಾರ್ಜುನ ಬಟಗಿ, ಫಯಾಜ್ ಕಲಾದಗಿ, ಅಕ್ಷಯ ಅಜಮನಿ, ಸುರೇಶ ಬಿಜಾಪುರ, ಸಂಘರ್ಷ ಹೊಸಮನಿ, ಸಂಗಮೇಶ ಸಗರ, ಲಕ್ಷ್ಮಣ ಕಂಬಾಗಿ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.