ರಾಜ್ಯದ ಎಲ್ಲ ಜಿಲ್ಲೆಗಳಿಗೆ ನವೋದಯ ಸ್ವಸಹಾಯ ಸಂಘ ವಿಸ್ತರಣೆ ಬೇಡಿಕೆ: ಡಾ.ಎಂ.ಎನ್‌.ರಾಜೇಂದ್ರಕುಮಾರ್

KannadaprabhaNewsNetwork |  
Published : Jul 10, 2025, 12:46 AM IST
ನವೋದಯ ಸ್ವಸಹಾಯ ಸಂಘಗಳ ಪ್ರಗತಿ ಪರಿಶೀಲನಾ ಸಭೆ  | Kannada Prabha

ಸಾರಾಂಶ

ಕಾರ್ಕಳ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾನುವಾರ ನಡೆದ ನವೋದಯ ಸ್ವಸಹಾಯ ಸಂಘಗಳ ಪ್ರೇರಕರ, ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರುನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸುತ್ತಿರುವ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಮುಖ್ಯವಾಗಿ ಮಹಿಳೆಯರ ಜೀವನದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿರುವ ನವೋದಯ ಸಂಘಗಳು ಸಂಘಟನಾತ್ಮಕವಾಗಿ ಹಾಗೂ ಶಿಸ್ತುಬದ್ಧ ಸಂಘಟನೆಯಾಗಿ ರೂಪುಗೊಂಡಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.ಅವರು ಕಾರ್ಕಳ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾನುವಾರ ನಡೆದ ನವೋದಯ ಸ್ವಸಹಾಯ ಸಂಘಗಳ ಪ್ರೇರಕರ, ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಈಗಾಗಲೇ ರಾಜ್ಯ ಎಂಟು ಜಿಲ್ಲೆಗಳಲ್ಲಿ 40,000ಕ್ಕೂ ಮಿಕ್ಕಿ ನವೋದಯ ಸ್ವ ಸಹಾಯ ಸಂಘಗಳನ್ನು ಸಂಘಟಿಸಿ, ಈ ಮೂಲಕ ತನ್ನ ಕಾರ್ಯವ್ಯಾಪ್ತಿಯನ್ನು ರಾಜ್ಯಮಟ್ಟಕ್ಕೂ ವಿಸ್ತರಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸಂಘಟಿಸಲ್ಪಟ್ಟ ನವೋದಯ ಸಂಘಗಳು ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಗಮನಿಸಿ ಇದೀಗ ರಾಜ್ಯದ ಇತರ ಜಿಲ್ಲೆಗಳಲ್ಲೂ ನವೋದಯ ಗುಂಪುಗಳ ರಚನೆಗೆ ಬೇಡಿಕೆ ಬಂದಿದೆ. ಮುಂದೆ ಹಂತಹಂತವಾಗಿ ಇತರ ಜಿಲ್ಲೆಗಳ ಬೇಡಿಕೆಗೆ ಸ್ಪಂದಿಸಲಾಗುವುದು ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಇದ್ದರು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದಯ ಸ್ವ-ಸಹಾಯ ಸಂಘಗಳ ಪ್ರೇರಕರು ಹಾಗೂ ನವೋದಯ ಮೇಲ್ವಿಚಾರಕರು ಇದ್ದರು.

PREV