ಕನ್ನಡಪ್ರಭ ವಾರ್ತೆ ಬೆಳಗಾವಿ
ಸಕ್ಕರೆ ಬೆಲೆ ಹೆಚ್ಚಾದರೂ ಕಬ್ಬಿನ ಬೆಲೆ ಏರಿಕೆಯಾಗಿಲ್ಲ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ₹ 4 ಸಾವಿರ ನಿಗದಿ ಮಾಡಬೇಕು. ಸ್ವಾಮಿನಾಥನ್ ವರದಿ ಯಥಾವತ್ ಜಾರಿಗೊಳಿಸಬೇಕು. ಬೆಳೆ ಹಾನಿಗೆ ವೈಜ್ಞಾನಿಕ ಪರಿಹಾರ ನೀಡಬೇಕು. ವಿದ್ಯುತ್ ಖಾಸಗೀಕರಣ ನೀತಿ ಕೈ ಬಿಡಬೇಕು. ಗೋವಿನ ಜೋಳ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ರೈತರ ಜಮೀನಿನಲ್ಲಿ ನಿಷ್ಕ್ರಿಯಗೊಂಡಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗಳನ್ನು ಬೇಗ ದುರಸ್ತಿಗೊಳಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಕೈಗಾರಿಕೆಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎಲ್ಲಾ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಎಂ.ಎನ್.ಕುಕನೂರ ಮಾತನಾಡಿ, ರಾಜ್ಯದಲ್ಲಿ ಶಾಶ್ವತ ನೀರಾವರಿ ಆಗಬೇಕು. ಅದಕ್ಕಾಗಿ ನಮ್ಮ ನದಿಗಳ ಜೋಡಣೆಯಾಗಬೇಕು. ರೈತರಿಗೆ 7 ಗಂಟೆ ನೀಡುವ ವಿದ್ಯುತ್ ಅನ್ನು 10 ಗಂಟೆ ನೀಡಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು. ತಕ್ಷಣ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ರೈತರ ಫಲವತ್ತಾದ ಭೂಮಿಗಳನ್ನು ಖಾಸಗೀಕರಣ ಮಾಡುತ್ತಿದ್ದು, ಅದನ್ನು ನಿಲ್ಲಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಕೃಷ್ಣ ಹಿತ್ತಲಮನಿ, ರಾಘವೇಂದ್ರ ನಾಯ್ಡು, ದೇವಯಾನಿ ಪಾಟೀಲ ಸೇರಿದಂತೆ ಇತರಿದ್ದರು.