ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹ

KannadaprabhaNewsNetwork |  
Published : Mar 17, 2026, 01:30 AM IST
ಪೊಟೊ: 16ಎಸ್‌ಎಂಜಿಕೆಪಿ01ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಮಾದಾರ ಮಹಾಸಭಾ ಹಾಗೂ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.  | Kannada Prabha

ಸಾರಾಂಶ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಮಾದಾರ ಮಹಾಸಭಾ ಹಾಗೂ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಮಾದಾರ ಮಹಾಸಭಾ ಹಾಗೂ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ತೇಜಸ್, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ 01-08-2024ರಂದು ಐತಿಹಾಸಿಕ ತೀರ್ಪು ನೀಡಿದರೂ ಇದುವರೆಗೂ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೇ 56,342 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಹೈಕೋರ್ಟ್‍ನಲ್ಲಿ ಶೇ.17ರಷ್ಟು ಮೀಸಲಾತಿ ವಿಚಾರ ಬಾಕಿ ಇದ್ದರೂ, ಹಾಲಿ ಇರುವ ಶೇ.15ರಷ್ಟು ಪರಿಶಿಷ್ಟ ಜಾತಿ ಮೀಸಲಾತಿಯಲ್ಲೇ ಒಳ ಮೀಸಲಾತಿ ಜಾರಿಗೊಳಿಸಲು ಯಾವುದೇ ಕಾನೂನು ಅಡೆತಡೆಗಳಿಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡು 56,342 ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಲಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡಬೇಕು ಎಂಬುದು ಕಳೆದ ಹಲವು ದಶಕಗಳಿಂದ ನಡೆಯುತ್ತಿರುವ ಹೋರಾಟವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಮಾದಾರ ಮಹಾಸಭಾ ಜಿಲ್ಲಾ ಅಧ್ಯಕ್ಷ ಶಿವಾಜಿ, ಪ್ರಮುಖರಾದ ರಮೇಶ್, ಎನ್‌ ರವಿಕುಮಾರ್, ಎನ್. ಗೋವಿಂದ, ತಿಮ್ಲಾಪುರ ಲೋಕೇಶ್, ಆರ್. ಶಿವಣ್ಣ, ಸೂಲಯ್ಯ, ಪ್ರಕಾಶ್, ರಂಗಪ್ಪ, ಪ್ರಭು, ಅಣ್ಣಪ್ಪ, ಮಂಜುನಾಥ್ ಎಸ್., ಚಿನ್ನಯ್ಯ. ಹೆಚ್.ಎನ್. ಪ್ರಭು. ಮಂಜಪ್ಪ ಬೀರನಕೆರೆ, ಅಣ್ಣಪ್ಪ, ಹಾಲೇಶಪ್ಪ, ಎ.ಕೆ. ಅಣ್ಣಪ್ಪ, ನಿಖಿಲ್ ಮೂರ್ತಿ, ಕೆಂಪಮ್ಮ, ರುದ್ರಮ್ಮ, ಗಿಡ್ಡಪ್ಪ, ನಾಗರಾಜ್, ಮೈಲಾರಪ್ಪ, ಮುಗುಳಗೆರೆ ಬಸವರಾಜ್, ನೀಲಪ್ಪ, ಅಣ್ಣಪ್ಪ ಎ.ಕೆ., ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿ ಜಾರಿ ಸಂಬಂಧ ತೀರ್ಮಾನ ಕೈಗೊಳ್ಳಿ
ಗುತ್ತಿಗೆದಾರರು ಪುರಸಭೆ ನಿಯಮದಂತೆ ಸುಂಕ ವಸೂಲಿ ಮಾಡಿ