ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯ

KannadaprabhaNewsNetwork |  
Published : Jul 26, 2025, 12:00 AM IST
25ಸಿಎಚ್‌ಎನ್‌58ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಹಾಗೂ ಜೀವ ಸಂಸ್ಥೆಯ ಅಧ್ಯಕ್ಷೆ ಪಿ.ಉಮಾ ಅವರು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ಹುದ್ದೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಿ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರು. ಅನುದಾನವನ್ನು ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಹಾಗೂ ಜೀವ ಸಂಸ್ಥೆಯ ಅಧ್ಯಕ್ಷೆ ಪಿ.ಉಮಾ ಒತ್ತಾಯಿಸಿದರು.

ಚಾಮರಾಜನಗರ: ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ಹುದ್ದೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಿ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರು. ಅನುದಾನವನ್ನು ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಹಾಗೂ ಜೀವ ಸಂಸ್ಥೆಯ ಅಧ್ಯಕ್ಷೆ ಪಿ.ಉಮಾ ಒತ್ತಾಯಿಸಿದರು.

ನಗರದ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದವರು ಕಳಂಕ, ತಾರತಮ್ಯ, ಸಮಾಜದ ತಿರಸ್ಕಾರ ಹಾಗೂ ಮೂಲ ಸೌಕರ್ಯಗಳಿಂದ ವಂಚಿತರಾಗಿ ಬದುಕುತ್ತಿದ್ದೇವೆ. ಈ ನಿಟ್ಟಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯದಲ್ಲಿ ಕರ್ನಾಟಕ ಟ್ರಾನ್ಸ್ಜೆಂಡರ್ ಪಾಲಿಸಿ-2017-ಅನುಮೋದನೆಗೊಂಡಿದೆ ಎಂದರು.ಈ ಕಾಯ್ದೆಯ ಪ್ರಕಾರ ಟ್ರಾನ್ಸ್ಜೆಂಡರ್‌ಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.1 ರಷ್ಟು ಮೀಸಲಾತಿ ಅವಕಾಶ ಕಲ್ಪಿಸಬೇಕಿದೆ. ಆದರೇರಾಜ್ಯ ಸರ್ಕಾರ ಕಾಯ್ದೆಯನ್ನು ಅನುಷ್ಠಾನಗೊಳಿಸದೆ ಲೈಂಗಿಕ ಅಲ್ಪಸಂಖ್ಯಾತರು ಉದ್ಯೋಗದಿಂದ ವಂಚಿತರಾಗುವಂತೆ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಟ್ರಾನ್ಸ್ಜೆಂಡರ್‌ಗಳಿಗೆ ಶೇ.1 ರಷ್ಟು ಮೀಸಲಾತಿಯನ್ನು ನೀಡಬೇಕು. ಅದರಲ್ಲಿ ಸ್ಪಷ್ಟ ಮಾರ್ಗಸೂಚಿಯನ್ನು ರೂಪಿಸಬೇಕು. ರಾಜ್ಯದಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಸೇವೆಯನ್ನು ಒದಗಿಸಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದ ವತಿಯಿಂದಲೇ ನಿವೇಶನ ಹಾಗೂ ಮನೆಗಳನ್ನು ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಮತಾಸೊಸೈಟಿ ಸಂಸ್ಥೆ ಅಧ್ಯಕ್ಷೆ ಎಚ್.ಜಿ. ದೀಪಾಬುದ್ದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಸಮತಾ ಸೊಸೈಟಿ ಸಂಸ್ಥೆಯ ಸದಸ್ಯರಾದ ದೊಡ್ಡಸ್ವಾಮಿ, ದೇವಿಯಮ್ಮ, ಮಂಜು ಹಾಜರಿದ್ದರು.

25ಸಿಎಚ್‌ಎನ್‌58

ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಹಾಗೂ ಜೀವ ಸಂಸ್ಥೆಯ ಅಧ್ಯಕ್ಷೆ ಪಿ.ಉಮಾ ಅವರು ಸುದ್ದಿಗೋಷ್ಠಿ ನಡೆಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್