ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗ ವರದಿ ಜಾರಿಗೆ ಆಗ್ರಹ

KannadaprabhaNewsNetwork |  
Published : Aug 27, 2026, 01:30 AM IST
 | Kannada Prabha

ಸಾರಾಂಶ

ತಾಲೂಕಿನ ಸಂತೆಕೆಲ್ಲೂರಿನ ಘನಮಠೇಶ್ವರ ಕಲ್ಯಾಣ ಮಂಟಪದಲ್ಲಿ ಆ.31ರಂದು ರಾಜ್ಯ ಮಟ್ಟದ 31 ಜಿಲ್ಲೆಗಳ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಶರಣಪ್ಪ ಮುರಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ತಾಲೂಕಿನ ಸಂತೆಕೆಲ್ಲೂರಿನ ಘನಮಠೇಶ್ವರ ಕಲ್ಯಾಣ ಮಂಟಪದಲ್ಲಿ ಆ.31ರಂದು ರಾಜ್ಯ ಮಟ್ಟದ 31 ಜಿಲ್ಲೆಗಳ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಶರಣಪ್ಪ ಮುರಳಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಜಾರಿಗಾಗಿ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ರೈತರ ಆತ್ಮಹತ್ಯೆ ತಡೆಯಲು ಸ್ವಾಮಿನಾಥನ್ ಆಯೋಗದ ವರದಿ ಆಧರಿಸಿ ಸಿಎಸಿಪಿ ವರದಿ ಪ್ರಕಾರ ಸಮಗ್ರ ವೆಚ್ಚಕ್ಕೆ ಎ1, ಎಫ್‌ಎಲ್, ಸಿ3, ಸಿ2 50% ಲಾಭಾಂಶ ಸೇರಿಸಿ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಗೊಳಿಸಬೇಕು, ಆ ಬೆಲೆಗಿಂತ ಕಡಿಮೆ ದರಕ್ಕೆ ಮಾರುಕಟ್ಟೆ ಯಲ್ಲಿ ಖರೀದಿಸದಂತೆ ವರ್ತಕರ ಮೆಲೆ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು. ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟವಾದರೆ ಎಂಎಸ್‌ಪಿ ಮತ್ತು ವರ್ತಕರು ಖರೀದಿಸಿದ ದರದ ವ್ಯತ್ಯಾಸದ ಮೊತ್ತವನ್ನು ಸರ್ಕಾರ ರೈತರ ಖಾತೆಗಳಿಗೆ ಜಮಾ ಮಾಡಬೇಕೆಂದರು.

ಕೃಷಿ ಉತ್ಪನ್ನಗಳ ಬೆಲೆ ಎಂಎಸ್‌ಪಿಗಿಂತ ಕಡಿಮೆ ಇದ್ದರೆ, ಅಂತಹ ಸಂದರ್ಭದಲ್ಲಿ ರೈತರು ಬೆಳೆದ ಎಲ್ಲ ಬೆಳೆಗಳನ್ನು ವರ್ಷಂಪೂರ್ತಿ ಸರ್ಕಾರ ಖರೀದಿಗಳಲ್ಲಿ ಖರೀದಿಸಿದ ಖರೀಸಿದ ದಿನವೇ ರೈತರ ಖಾತೆಗಳಿಗೆ ಹಣವನ್ನು ಜಮಾ ಮಾಡಬೇಕೆಂದು ಒತ್ತಾಯಿಸಿದರು.

ಆದ್ದರಿಂದ ಈ ರೈತರ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ, ಶಶಿಕಾಂತ ಪಡಸಲಗಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ರೈತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯ ರೈತ ಮುಖಂಡರು ಮತ್ತು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಂಡರು.

ಸಮಾವೇಶದಲ್ಲಿ ರೈತರ ಹಕ್ಕೊತ್ತಾಯಗಳು: ರೈತರ ಆತ್ಮಹತ್ಯೆ ತಡೆಯಲು, ರೈತರ ಆದಾಯ ದ್ವಿಗುಣವಾಗಲು ಕೇಂದ್ರ ಸರ್ಕಾರದಲ್ಲಿ 20 ವರ್ಷಗಳಿಂದ ಜಾರಿಯಾಗದಿರುವ ಡಾ.ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿ ಸಂಪೂರ್ಣ ಜಾರಿಗೊಳಿಸಬೇಕು, ರೈತರ ಎಲ್ಲಾ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಸಾಲ ವಸೂಲಾತಿಗಾಗಿ ಮಾಡುವ ಕಿರುಕುಳ ತಪ್ಪಿಸಬೇಕು, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅನುಗುಣವಾಗಿ ಶಿಕ್ಷಕರನ್ನು ನೇಮಿಸಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿರುವ ಹುದ್ದೆಗಳಿಗೆ ಕೂಡಲೇ ವೈದ್ಯರನ್ನು ನೇಮಿಸಿಕೊಳ್ಳಬೇಕು. ಹಾಗೂ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ಖಾಲಿರುವ ಹುದ್ದೆಗಳನ್ನು ಖಾಯಂ ಸೇಮಕಾತಿ ಮಾಡಿಕೊಳ್ಳುವ ಮೂಲಕ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿಸಬೇಕು, ಕೇಂದ್ರ ಸರ್ಕಾರ ತಂದಿರುವ ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಒದಗಿಸಬೇಕು. ಕುರಿ, ಮೇಕೆ, ಜಾನುವಾರುಗಳಿಗೆ ಮೇಯಿಸುವುದಕ್ಕೆ ಮೀಸಲಿಟ್ಟ ಗಾಯರಾಣ, ಅರಣ್ಯ, ಗೋಮಾಳ, ಪರಂಪೊಕ ಮೀಸಲಿರುವುದರ ಜತೆಗೆ ಕೃಷಿಯೇತರ ಚುಟುವಟಿಕೆಗೆ (ಕಾರ್ಪೋರೇಟ್ ವಲಯಕ್ಕೆ) ನೀಡಬಾರದು, ವರ್ತಕರು ಅನಧಿಕೃತವಾಗಿ ರೈತರ ಉತ್ಪನ್ನಗಳಿಗೆ ಸೂಟ್, ಹೆಚ್ಚಿನ ಹಮಾಲಿ, ಕಮಿಷನ್ ತೆಗೆದುಕೊಳ್ಳಬಾರದು ಸೇರಿದಂತೆ ಇತರೆ ಹಕ್ಕೊತ್ತಾಯಗಳನ್ನು ರಾಜ್ಯ ಸರಕಾರಕ್ಕೆ ಮಂಡಿಸಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಮಯ್ಯ ಜವಳಗೇರಾ, ವೆಂಕಟೇಶ ಸಂತೆಕೆಲ್ಲೂರು, ಚನ್ನಬಸಯ್ಯ, ಬಸವರಕುಮಾರ, ಸಬೀಸಾಬ ಸಂತೆಕೆಲ್ಲೂರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂತ್ರಿ ಪಟ್ಟಕ್ಕಾಗಿ ರೈತರಿಗೆ ಮಧು, ಎಸ್ಸೆಸ್ಸೆಂ ಅನ್ಯಾಯ
ಗುಟ್ಕಾ, ಪಾನ್ ಮಸಾಲ ನಿಷೇಧ ವಿರೋಧಿಸಿ ಹೋರಾಟ ಶುರು