ಪರಿಶಿಷ್ಟ ಉಪ ಜಾತಿಗಳಿಗೆ ಒಳ ಮೀಸಲು ನೀಡುವಂತೆ ಆಗ್ರಹ

KannadaprabhaNewsNetwork |  
Published : Sep 22, 2024, 01:55 AM IST
ಚಿತ್ರದುರ್ಗ ನಾಲ್ಕನೇ ಪುಟದa ಕಟ್  ಲೀಡ್   | Kannada Prabha

ಸಾರಾಂಶ

ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನನ್ವಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಪ್ರೊ. ಸಿ.ಕೆ. ಮಹೇಶ್ ಒತ್ತಾಯಿಸಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನನ್ವಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಪ್ರೊ. ಸಿ.ಕೆ. ಮಹೇಶ್ ಒತ್ತಾಯಿಸಿದರು.

ಜಿಲ್ಲೆಯ ಕ್ರೀಡಾ ಭವನದಲ್ಲಿ ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘ ಹಾಗೂ ಸಾಮಾಜಿಕ ಸಂಘರ್ಷ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಬದಲು ಪಕ್ಷದ ಹೈಕಮಾಂಡ್ ಹೆಗಲಿಗೆ ವಹಿಸಲು ಗಮನ ಕೊಡುತ್ತಿದೆ. ಮಾದಿಗ ರಾಜಕಾರಣಿಗಳು ಒಳ ಮೀಸಲಾತಿಗಾಗಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಬದಲು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿ ಅಧಿಕಾರದಿಂದ ಹೊರ ಬರುವುದು ಒಳ್ಳೆಯದೆಂಬ ಸಲಹೆ ನೀಡಿದರು.

ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದಲೂ ನಡೆಯುತ್ತಿರುವ ಹೋರಾಟಕ್ಕೆ ಸುಪ್ರಿಂಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ಆದರೆ ಸರ್ಕಾರ ನಡೆಸುವ ರಾಜಕಾರಣಿಗಳು ಶೀಘ್ರವೇ ಜಾರಿಗೊಳಿಸುವ ಇಚ್ಚಾಶಕ್ತಿ ತೋರಬೇಕಾಗಿದೆ ಎಂದರು.ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ ಮಾತನಾಡಿ, ಕಳೆದ ಮೂರು ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆದುಕೊಂಡು ಬರುತ್ತಿದೆ. ಅಧಿಕಾರವಿಲ್ಲದಿದ್ದಾಗ ಒಳ ಮೀಸಲಾತಿಗಾಗಿ ಕೂಗುವವರು ಅಧಿಕಾರ ಕೈಗೆ ಸಿಕ್ಕಾಗ ಧ್ವನಿ ಎತ್ತುವ ಬದಲು ಸೈಲೆಂಟ್ ಆಗಿ ತಮ್ಮ ಕುರ್ಚಿ ಉಳಿಸಿಕೊಳ್ಳುವುದರ ಕಡೆಗಷ್ಟೆ ಗಮನ ಕೊಡುತ್ತಿರುವುದು ನೋವಿನ ಸಂಗತಿ ಎಂದರು.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಒಂದು ವೇದಿಕೆಗೆ ಕರೆ ತಂದು ಒಳ ಮೀಸಲಾತಿಯನ್ನು ಪಡೆದುಕೊಳ್ಳಬೇಕಾಗಿದೆ ಎಂದು ತಿಳಿದರು.ಗುಲ್ಬರ್ಗದ ಕಟ್ಟಿಮನಿ ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರಿಂಕೋರ್ಟ್ ಆಯಾ ರಾಜ್ಯಗಳಿಗೆ ವಹಿಸಿ ತೀರ್ಪು ಹೊರಡಿಸಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಣಯ ಕೈಗೊಳ್ಳುವ ಬದಲು ಖರ್ಗೆ ನೇತೃತ್ವದ ಸಮಿತಿಗೆ ವಹಿಸಿರುವುದು ಅತ್ಯಂತ ಖಂಡನೀಯ ಎಂದು ಅಸಮಾನಧಾನ ವ್ಯಕ್ತಪಡಿಸಿದರು.

ಪ್ರಧಾನ ಸಂಚಾಲಕ ಎನ್. ಮಾರಪ್ಪ, ಡಿ. ದುರುಗೇಶಪ್ಪ, ಕೆ.ಟಿ. ರಂಗಯ್ಯ, ನಂಜುಂಡ ಮೌರ್ಯ, ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ. ಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಣ್ಣ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ