ಮಹೇಶ್‌ ಜೋಶಿ ಕಾಲದಲ್ಲಾಗಿರುವಅವ್ಯವಹಾರಗಳ ತನಿಖೆಗೆ ಆಗ್ರಹ

KannadaprabhaNewsNetwork |  
Published : Jul 17, 2025, 12:33 AM IST
ಪೊಟೋ: 15ಎಸ್‌ಎಂಜಿಕೆಪಿ03ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ನಾಡು ನುಡಿ ಜಾಗೃತಿ ಸಮಿತಿಯ ಪ್ರಮುಖರಾದ ಡಾ.ಎಚ್.ವಿ.ಕೃಷ್ಣಮೂರ್ತಿ ಮಾತನಾಡಿದರು. | Kannada Prabha

ಸಾರಾಂಶ

ನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಅವರ ಕಾಲದಲ್ಲಾಗಿರುವ ಅವ್ಯವಹಾರಗಳ ಕುರಿತು ತನಿಖೆಗೆ ಆಗ್ರಹಿಸಿ ಆ.3ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ನಾಡು ನುಡಿ ಜಾಗೃತಿ ಸಮಿತಿಯ ಪ್ರಮುಖ ಡಾ.ಎಚ್.ವಿ.ಕೃಷ್ಣಮೂರ್ತಿ ತಿಳಿಸಿದರು.

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಅವರ ಕಾಲದಲ್ಲಾಗಿರುವ ಅವ್ಯವಹಾರಗಳ ಕುರಿತು ತನಿಖೆಗೆ ಆಗ್ರಹಿಸಿ ಆ.3ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ನಾಡು ನುಡಿ ಜಾಗೃತಿ ಸಮಿತಿಯ ಪ್ರಮುಖ ಡಾ.ಎಚ್.ವಿ.ಕೃಷ್ಣಮೂರ್ತಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸಾಕಷ್ಟು ಅವ್ಯವಹಾರಗಳಾಗಿವೆ. ಇದನ್ನು ತನಿಖೆ ಮಾಡುವಂತೆ ಈಗಾಗಲೇ ನಾವು ಸಹಕಾರ ಇಲಾಖೆಗೆ ದೂರು ಸಲ್ಲಿಸಿದ್ದೆವು. ಅವರು ಈಗಾಗಲೇ ತನಿಖೆಗೆ ತನಿಖಾ ಸಮಿತಿ ರಚಿಸಿದ್ದಾರೆ. ಮಂಡ್ಯ ಸಮ್ಮೇಳನದಲ್ಲಿ ತಾತ್ಕಾಲಿಕ ಶೌಚಾಲಯಕ್ಕಾಗಿಯೇ 68 ಲಕ್ಷ ರು. ಖರ್ಚು ಮಾಡಿದ್ದಾರೆ. ಇಷ್ಟು ಹಣದಲ್ಲಿ ಶಾಶ್ವತವಾದ ಶೌಚಾಲಯಗಳನ್ನೇ ನಿರ್ಮಾಣ ಮಾಡಬಹುದಿತ್ತು. ಯಾವ ಆಡಿಟ್ ಅನ್ನೂ ಮಾಡಿಲ್ಲ. ಆರ್ಥಿಕ ಅಪರಾಧಗಳು ಅವರ ಕಾಲದಲ್ಲಿ ಆಗಿವೆ. ಪ್ರಶ್ನೆ ಮಾಡುವವರನ್ನು ಕಂಡುಹಿಡಿದು ಅವರ ವಿಳಾಸವನ್ನು ಫೋನ್ ಮಾಡಿ ಪತ್ತೆ ಹಚ್ಚಿ ಲೀಗಲ್ ನೋಟಿಸ್ ಕಳಿಸುತ್ತಿದ್ದಾರೆ. ಈ ನೋಟಿಸ್‌ಗಳೂ ಇಂಗ್ಲಿಷ್‌ನಲ್ಲಿವೆ ಎಂದು ಆರೋಪಿಸಿದರು. ವಕೀಲ ಕೆ.ಪಿ.ಶ್ರೀಪಾಲ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತನ್ನು ದುರುಪಯೋಗಪಡಿಸಿಕೊಂಡು ಹಲವು ಆರ್ಥಿಕ ಅಪರಾಧಗಳನ್ನು ಅವರು ಮಾಡಿದ್ದಾರೆ. ಮಂಡ್ಯದ ಸಾಹಿತ್ಯ ಸಮ್ಮೇಳನದ ಪೆಂಡಾಲ್‌ಗಾಗಿ 9 ಕೋಟಿ ರು. ಖರ್ಚು ಮಾಡಿದ್ದಾರೆ. ಇದಕ್ಕೆ ಯಾವುದೇ ಟೆಂಡರ್ ಕರೆದಿಲ್ಲ. ಹಣ ಸಂಪೂರ್ಣ ದುರುಪಯೋಗವಾಗಿದೆ. ಕೂಡಲೇ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರನ್ನು ಅಮಾನತಿನಲ್ಲಿಟ್ಟು, ತನಿಖೆ ನಡೆಸಬೇಕು. ಅಲ್ಲಿಯವರೆಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ರಂಗಕರ್ಮಿ ಹೊನ್ನಾಳಿ ಚಂದ್ರಶೇಖರ್ ಮಾತನಾಡಿ, ಕಳೆದ 6 ತಿಂಗಳಿಂದ ಸರ್ವಾಧಿಕಾರಿ ರಾಜ್ಯಾಧ್ಯಕ್ಷರ ವಿರುದ್ಧ ನಾವು ಹೋರಾಟ ಮಾಡುತ್ತಲೇ ಬಂದಿದ್ದೇವೆ. ಈಗಾಗಲೇ 17 ಬಾರಿ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಅವರ ಭ್ರಷ್ಟಾಚಾರಗಳು ಹೆಚ್ಚಿವೆ. ಕಂಪ್ಯೂಟರ್ ಖರೀದಿ, ಹಾವೇರಿಯ ರಥಯಾತ್ರೆ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದ್ದರೂ ಮಾಹಿತಿಯನ್ನು ಅವರು ನೀಡಿಲ್ಲ. ಹೀಗಾಗಿ ಅವರ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬೈಲಾವನ್ನು ಕೂಡ ಯಾರಿಗೂ ಹೇಳದೇ ತಿದ್ದುಪಡಿ ಮಾಡಿದ್ದಾರೆ. ಈಗಾಗಲೇ ಅವರೇ ನೇಮಿಸಿದ್ದ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಅವರ ವಿರುದ್ಧ ಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೃಷ್ಣಮೂರ್ತಿ ಹಿಳ್ಳೋಡಿ, ಮಂಜುನಾಥ್ ಕಾಮತ್, ಶಶಿಕಲಾ, ಸಂಗಮೇಶ್ ಮೊದಲಾದವರಿದ್ದರು.

PREV

Latest Stories

ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ