-ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಳೆದ 2 ವರ್ಷಗಳಿಂದ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಕರೆದಿಲ್ಲ ಎಂದು ಆರೋಪಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗಳನ್ನು 2 ವರ್ಷಗಳಿಂದ ಅರ್ಹ ಫಲಾನುಭವಿಗಳಿಗೆ ನೀಡುತ್ತಿಲ್ಲ, ಬಡವರು ಮತ್ತು ಮಧ್ಯಮ ವರ್ಗದವರು ವಂಚಿತರಾಗುತ್ತಿದ್ದಾರೆ. ಈ ಹಿಂದೆ ರಾಜ್ಯದಲ್ಲಿ 10.10 ಲಕ್ಷ ಅರ್ಜಿಗಳನ್ನು ಬಿಪಿಎಲ್ ಕಾರ್ಡ್‌ಗಳಿಗಾಗಿ ಕರೆಯಲಾಗಿತ್ತು. ಇದರಲ್ಲಿ 7.99 ಲಕ್ಷ ಇತ್ಯಾರ್ಥ ಪಡಿಸಿ ಇನ್ನು 2.10 ಲಕ್ಷ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿದೆ ಎಂದರು.
ಅನ್ನಭಾಗ್ಯ, ಗೃಹಲಕ್ಷ್ಮೀ, ಆಯುಷ್ಮಾನ್ ಭಾರತ್, ರೈತರಿಗೆ ಸಬ್ಸಿಡಿ ವಿವಿಧ ಸಾಮಾಜಿಕ ಭದ್ರತೆಯ ಯೋಜನೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳು ಬಡವರಿಗೆ ಕಾರ್ಡ್‌ಗಳಿಲ್ಲದೆ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಬಾಕಿ ಉಳಿಸಿಕೊಂಡ ಅರ್ಜಿಗಳನ್ನು ಇತ್ಯಾರ್ಥಗೊಳಿಸಿ ಬಡವರಿಗೆ ನೀಡಬೇಕು. ಮತ್ತು ಹೊಸದಾಗಿ ಅರ್ಜಿ ಹಾಕಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
-------------------------
24ಎಸ್‌ಎಂಜಿಕೆಪಿ09