ಚಿಕ್ಕಬಳ್ಳಾಪುರ:
ಪ್ರತಿಭಟನೆಯನ್ನು ಉದ್ದೇಶಿಸಿ ವೇದಿಕೆಯ ಸಂಚಾಲಕ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮೃತಪಟ್ಟ ಕುಟುಂಬಗಳಿಗೆ ಕನಿಷ್ಠ 5 ಕೋಟಿ ಪರಿಹಾರ ನೀಡಬೇಕು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಪ್ರಕರಣ ದಾಖಲಿಸಿ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹೇಳಿದರು.
ವೇದಿಕೆಯ ಮತ್ತೊಬ್ಬ ನಾಯಕ ಕೆ.ಸಿ.ರಾಜಕಾಂತ್ ಮಾತನಾಡಿ, ಘೋರ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವ ಈ ಪ್ರಕರಣದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು.ಪ್ರತಿಭಟನೆಯಲ್ಲಿ ದಲಿತ ರೈತ ಕಾರ್ಮಿಕ ಐಕ್ಯ ಹೋರಾಟ ವೇದಿಕೆಯ ಪರಮೇಶ್, ಬಿ.ಎನ್.ಮುನಿಕೃಷ್ಣಪ್ಪ, ಸಿ.ಜಿ.ಗಂಗಪ್ಪ, ಸಿದ್ದಗಂಗಪ್ಪ, ವೈ.ಶಂಕರ್, ವೆಂಕಟರವಣಪ್ಪ, ಶ್ರೀರಂಗಾಚಾರಿ, ರಾಜಶೇಖರಯ್ಯ, ಟಿ.ಮುನಿರಾಜು ಎಂ.ಎಸ್.ಆನಂದ್, ಮತ್ತಿತರರು ಇದ್ದರು.