ಶಿಕ್ಷಣ ಕ್ರಾಂತಿ ಮಾಡುವುದೇ ನನ್ನ ಗುರಿ: ಚಿದಾನಂದ್ ಎಂ.ಗೌಡ

KannadaprabhaNewsNetwork |  
Published : Feb 04, 2026, 01:15 AM IST
೩ಶಿರಾ೧: ಶಿರಾ ಶಿರಾ ನಗರದ ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಮೊದಲ ಮಹಡಿಯ ನೂತನ ಕಟ್ಟಡ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪ್ರಯೋಗಾಲಯ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಉದ್ಘಾಟಿಸಿದರು. ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳು, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಸೇರಿದಂತೆ ಹಲವರು ಹಾಜರಿದ್ದರು.  | Kannada Prabha

ಸಾರಾಂಶ

ಯಾವುದೇ ಒಬ್ಬ ವ್ಯಕ್ತಿ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣವೂ ಒಂದು ಮುಖ್ಯ ಸಾಧನವಾಗಿದ್ದು, ಅದಕ್ಕಾಗಿಯೇ ಶಿರಾ ತಾಲೂಕಿನಲ್ಲಿ ಶಿಕ್ಷಣ ಕ್ರಾಂತಿ ಮಾಡಬೇಕೆಂಬುದು ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಒಂದೊಂದು ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಯಾವುದೇ ಒಬ್ಬ ವ್ಯಕ್ತಿ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣವೂ ಒಂದು ಮುಖ್ಯ ಸಾಧನವಾಗಿದ್ದು, ಅದಕ್ಕಾಗಿಯೇ ಶಿರಾ ತಾಲೂಕಿನಲ್ಲಿ ಶಿಕ್ಷಣ ಕ್ರಾಂತಿ ಮಾಡಬೇಕೆಂಬುದು ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಒಂದೊಂದು ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ನೂತನ ಶಾಲಾ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಶಿರಾ ನಗರದ ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಮೊದಲ ಮಹಡಿಯ ನೂತನ ಕಟ್ಟಡ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪ್ರಯೋಗಾಲಯ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಈ ಶಾಲೆಯನ್ನು ಕೆಪಿಸ್ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಈ ಶಾಲೆಗೆ ಹೆಚ್ಚು ಹೆಚ್ಚು ನಿಮ್ಮ ಸ್ನೇಹಿತರನ್ನು ದಾಖಲು ಮಾಡಿ ಎಂದರು.

ತುಮಕೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳು ಆರ್ಶೀವಚನ ನೀಡುತ್ತ, ಸರ್ಕಾರದ ಅನುದಾನದ ಜೊತೆಗೆ ತಮ್ಮ ವೈಯಕ್ತಿಕ ಹಣವನ್ನೂ ಖರ್ಚು ಮಾಡಿ ಗುಣಮಟ್ಟದ ಕಟ್ಟಡ ನಿರ್ಮಿಸಿ ತಮ್ಮ ಹೃದಯವಂತಿಕೆ ಮೆರೆದಿದ್ದಾರೆ ಎಂದರು.

ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಮಾತಾಡಿದರು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ನಗರಸಭೆ ಸದಸ್ಯರಾದ ಅಂಬುಜಾಕ್ಷಿ, ಉಮಾ ವಿಜಯರಾಜ್, ಸುಶೀಲ ವಿರೂಪಾಕ್ಷ, ಮಾಜಿ ಸದಸ್ಯ ಸಂತೇಪೇಟೆ ನಟರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತರಾಜು ಇತರರಿದ್ದರು.

ಫೋಟೋ :

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ