ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಿ

KannadaprabhaNewsNetwork |  
Published : Oct 06, 2023, 01:13 AM IST
5ಎಚ್ಎಸ್ಎನ್9 :ಚನ್ನರಾಯಪಟ್ಟಣದಲ್ಲಿ ಭೂಮಿ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಕನ್ನಡ ನಾಮಫಲಕ ಅಳವಡಿಕೆ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ನವೆಂಬರ್‌ ತಿಂಗಳಲ್ಲಿ ರಾಜ್ಯಾದ್ಯಂತ ಸುವರ್ಣ ರಾಜ್ಯೋತ್ಸವ ಆಚರಣೆ ನಡೆಸಲಾಗುತ್ತಿದ್ದು, ಪಟ್ಟಣದಲ್ಲಿನ ಎಲ್ಲ ಅಂಗಡಿ, ಮುಂಗಟ್ಟುಗಳು, ಕೈಗಾರಿಕೆ, ಶಾಲಾ-ಕಾಲೇಜುಗಳು ನ. ೧ರೊಳಗೆ ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಬೇಕು ಎಂದು ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಮನವಿ ನವೆಂಬರ್‌ ತಿಂಗಳಲ್ಲಿ ರಾಜ್ಯಾದ್ಯಂತ ಸುವರ್ಣ ರಾಜ್ಯೋತ್ಸವ ಆಚರಣೆ ನಡೆಸಲಾಗುತ್ತಿದ್ದು, ಪಟ್ಟಣದಲ್ಲಿನ ಎಲ್ಲ ಅಂಗಡಿ, ಮುಂಗಟ್ಟುಗಳು, ಕೈಗಾರಿಕೆ, ಶಾಲಾ-ಕಾಲೇಜುಗಳು ನ. ೧ರೊಳಗೆ ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಬೇಕು ಎಂದು ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ಪತ್ರಕರ್ತರ ಭವನದಲ್ಲಿ ಭೂಮಿ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಜಿ.ಎನ್.ರಮೇಶ್, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕನ್ನಡ ಭಾಷೆ, ನೆಲ, ಜಲದ ಋಣ ತೀರಿಸಲು ವರ್ತಕರಿಗೆ, ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ಜಾಗೃತಿ ಮೂಡಿಸಲಾಗುವುದು. ಪಟ್ಟಣದ ೨೩ ವಾರ್ಡ್‌ಗಳಲ್ಲಿರುವ ಅಂಗಡಿಗಳು ಕನ್ನಡ ನಾಮಫಲಕ ಅಳವಡಿಕೆಗೆ ಬದ್ಧವಾಗಬೇಕು, ನಾವುಗಳು ಇಂಗ್ಲಿಷ್ ವಿರೋಧಿಗಳಲ್ಲ, ಆದರೆ ಮೊದಲ ಆದ್ಯತೆ ನಮ್ಮ ಮಾತೃ ಭಾಷೆ ಕನ್ನಡಕ್ಕಿರಲಿ ಎಂಬುದು ನಮ್ಮಗಳ ನಿಲುವು ಎಂದರು. ಸಂಘದ ಗೌರವಾಧ್ಯಕ್ಷ ರಾಜಕುಮಾರ್‌ ಮಾತನಾಡಿ, ಭೂಮಿ ಕ್ಷೇಮಾಭಿವೃದ್ಧಿ ಸಂಘವು ಪಟ್ಟಣದಲ್ಲಿ ಕಳೆದ ೭ವರ್ಷಗಳಿಂದ ಸಾಮಾಜಿಕ ಕಳಕಳಿಯ ಹೋರಾಟಗಳನ್ನು ನಡೆಸುತ್ತಾ ಬಂದಿದೆ. ಇದೀಗ ಕನ್ನಡ ರಾಜ್ಯೋತ್ಸವ ಸಲುವಾಗಿ ಕನ್ನಡಿಗರನ್ನು ಎಚ್ಚರಿಸುವ ಕೆಲಸಕ್ಕೆ ಮುಂದಾಗಿದೆ. ಇದು ಬರೀ ನವೆಂಬರ್ ಮಾಹೆಗೆ ಸೀಮಿತವಲ್ಲವೆಂದ ಅವರು, ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿರಿಮೀರಿದ್ದು, ಎಲ್ಲ ೨೩ವಾರ್ಡ್‌ಗಳಲ್ಲಿ ಎಲ್ಲಿ ಹೋದರೂ ಬೀದಿ ನಾಯಿಗಳು ಗುಂಪುಗುಂಪಾಗಿ ಕಂಡು ಬರುತ್ತಿದ್ದು, ಪುರಸಭೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಪಟ್ಟಣದ ಒಳಚರಂಡಿಗಳ ಕಲುಷಿತ ನೀರು ಹಾಗೂ ಇತರೆ ತ್ಯಾಜ್ಯ ಅಮಾನಿಕೆರೆಗೆ ಒಡಲು ಸೇರುತ್ತಿದೆ. ಈಗಾಗಲೇ ಕೆರೆ ದುರ್ವಾಸನೆಯಿಂದ ಗಬ್ಬೆದ್ದು ನಾರುತ್ತಿದೆ. ಅಮಾನಿಕೆರೆಯ ಸುತ್ತಮುತ್ತಲ ಕೊಳವೆ ಬಾವಿಗಳಲ್ಲಿನ ನೀರು ಸಹ ಕಲುಷಿತಗೊಂಡು ಅಂತರ್ಜಲ ಮಲೀನವಾಗುತ್ತಿದೆ. ಈ ನೀರನ್ನು ಕುಡಿದ ಗ್ರಾಮೀಣ ಜನರಲ್ಲಿ ಮೈ ಕೆರೆತ, ತುರಿಕೆ ಉಂಟಾಗುತ್ತಿದೆ. ಸಾಂಕ್ರಾಮಿಕ ರೋಗದ ಭೀತಿಯನ್ನು ಜನತೆ ಈಗಾಗಲೇ ಎದುರಿಸುತ್ತಿದ್ದಾರೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕದಲ್ಲಿ ಕೆರೆ ಸುತ್ತಮುತ್ತಲಿನ ಜನತೆ ಜೀವನ ಸಾಗಿಸುತ್ತಿದ್ದಾರೆ. ಪುರಸಭೆ ಈ ಕುರಿತಾಗಿ ಎಚ್ಚೆತ್ತುಕೊಳ್ಳದಿದ್ದರೆ ಹೋರಾಟ ರೂಪಿಸಬೇಕಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜೆ.ಸೋಮಶೇಖರ್‌, ನಿಕಟಪೂರ್ವ ಗೌರವಾಧ್ಯಕ್ಷ ಕೆ.ಆರ್‌.ನಾಗರಾಜ್‌, ಗೌ.ಅಧ್ಯಕ್ಷ ಡಿಶ್‌ ಕುಮಾರ್, ತಾಲೂಕು ಉಪಾಧ್ಯಕ್ಷ ಶಂಕರಣ್ಣ ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ