ನರಗುಂದ: ಮಾಜಿ ಸಂಸದ ರಮೇಶ ಕತ್ತಿಯವರು ವಾಲ್ಮೀಕಿ ಜನಾಂಗದವರಿಗೆ ಜಾತಿನಿಂದನೆ ಮಾಡಿದ್ದು, ಅವರ ಮೇಲೆ ಸರ್ಕಾರ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲೂಕು ವಾಲ್ಮೀಕಿ ಮಹರ್ಷಿ ಟ್ರಸ್ಟ್‌ನ ಪದಾಧಿಕಾರಿಗಳು ಸರ್ಕಾರಕ್ಕೆ ಆಗ್ರಹಿಸಿದರು.ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ವಾಲ್ಮೀಕಿ ಮಹರ್ಷಿ ಟ್ರಸ್ಟ್ ಪದಾಧಿಕಾರಿಗಳು, ಜಾತಿನಿಂದನೆ ಮಾಡಿದ ಕತ್ತಿಯವರ ಮೇಲೆ ಕಾನೂನು ಕ್ರಮ ಸರ್ಕಾರ ಕೈಗೊಳ್ಳಬೇಕೆಂದು ತಹಸೀಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿ ನಂತರ ಸಮಾಜದ ಮುಖಂಡರು ಮಾತನಾಡಿದರು.
ತಹಸೀಲ್ದಾರ್ ಶ್ರೀಶೈಲ ತಳವಾರ ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಾಲೂಕು ವಾಲ್ಮೀಕಿ ಮಹರ್ಷಿಗಳ ಟ್ರಸ್ಟ್‌ನ ಪದಾಧಿಕಾರಿಗಳು ಇದ್ದರು. ಬೆಂಬಲ ಬೆಲೆಯಡಿ ಹತ್ತಿ ಖರೀದಿ: ರೈತರಿಗೆ ಸೂಚನೆ
ಗದಗ: ಮುಂಗಾರು ಹಂಗಾಮಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿಯನ್ನು ಜಿಲ್ಲೆಯಲ್ಲಿ ಅಂದಾಜು 7000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಮಧ್ಯಮ ಎಳೆ ಹತ್ತಿಗೆ ₹7710 ಮತ್ತು ಉದ್ದನೆಯ ಎಳೆ ಹತ್ತಿಗೆ ₹8110 ದರವನ್ನು ಘೋಷಿಸಿದೆ.ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅ. 31 ಕೊನೆಯ ದಿನ. ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಭಾರತೀಯ ಹತ್ತಿ ನಿಗಮದ KAPAS Kisan Appನಲ್ಲಿ ಅ. 31ರೊಳಗಾಗಿ ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಭಾರತೀಯ ಹತ್ತಿ ನಿಗಮದ ಗದಗ ಕಚೇರಿ, ಜಿ. ರಮೆಶ, ಮೊ. 7893429671(ಭಾರತೀಯ ಹತ್ತಿ ನಿಗಮ), ರಮೇಶ ಜಿ.ಕೆ. ಮೊ. 9632708161(ಭಾರತೀಯ ಹತ್ತಿ ನಿಗಮ) ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.