-ಕರುನಾಡ ವಿಜಯಸೇನೆಯಿಂದ ಕೆಎಸ್ ಆರ್‌ಟಿ ನಿಲ್ದಾಣದಲ್ಲಿ ಪ್ರತಿಭಟನೆ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಕನ್ನಡದಲ್ಲಿ ಮಾತನಾಡಿದ್ದಕ್ಕೆ ಬೆಳಗಾವಿಯಲ್ಲಿ ಮರಾಠಿ ಪುಂಡರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಂಡಕ್ಟರ್ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ಬೆಳಗಾವಿ ರಸ್ತೆ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಮಹದೇವನ ಮೇಲೆ ಹಾಕಿರುವ ಪೋಕ್ಸೊ ಕೇಸ್ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.
ಗೃಹ ಸಚಿವರು ಪೊಲೀಸರ ಮೂಲಕ ಕನ್ನಡಿಗರ ಮೇಲೆ ಮನಬಂದಂತೆ ಕೇಸು ಹಾಕಿಸುತ್ತಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ವಿಜಯಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ನಿಸಾರ್ ಅಹಮದ್, ಅಖಿಲೇಶ್, ಅವಿನಾಶ್, ಮುಜಾಹಿದ್, ಯರ್ರಿಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪೋಟೋ: ಮರಾಠಿ ಪುಂಡರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೋಟೋ: 23 ಸಿಟಿಡಿ6ಚಿತ್ರದುರ್ಗ ಪೋಟೋ ಸುದ್ದಿ111