ಹಿಂದಿಯನ್ನು ಕಡ್ಡಾಯವಾಗಿ ಕೈಬಿಡುವಂತೆ ಕರವೇ ಆಗ್ರಹ

KannadaprabhaNewsNetwork |  
Published : Sep 04, 2024, 01:46 AM IST
೩ಕೆಎಂಎನ್‌ಡಿ-೩ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಕಡ್ಡಾಯವಾಗಿ ಕೈಬಿಡುವಂತೆ ಒತ್ತಾಯಿಸಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ನಾಡಿನ ಪ್ರತಿಭಾವಂತ ಮಕ್ಕಳು ಕಡಿಮೆ ಅಂಕಗಳಿಗೆ ತೃಪ್ತಿ ಪಟ್ಟುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಬ್ಯಾಂಕಿಂಗ್, ರೈಲ್ವೆ ಸೇರಿದಂತೆ ಒಕ್ಕೂಟ ಸರ್ಕಾರದ ಉದ್ಯೋಗಗಳಿಂದ ವಂಚಿತರಾಗುವುದಲ್ಲದೇ, ರಾಜ್ಯದ ಪ್ರತಿಷ್ಠಿತ ಕಂಪನಿಗಳ ಉದ್ಯೋಗಗಳು ಪರರಾಜ್ಯದವರ ಪಾಲಾಗುತ್ತಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯ ಪಠ್ಯಕ್ರಮದಲ್ಲಿ ಹಿಂದಿಯನ್ನು ಕಡ್ಡಾಯವಾಗಿ ಕೈಬಿಡುವಂತೆ ಒತ್ತಾಯಿಸಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಕಾರ್ಯಕರ್ತರು, ಅಪರ ಜಿಲ್ಲಾಧಿಕಾರಿ ಡಾ ಎಚ್.ಎಲ್.ನಾಗರಾಜು ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ರವಾನಿಸಿದರು. ರಾಜ್ಯದಲ್ಲಿರುವ ಕೇಂದ್ರೀಯ ಸದನ ಶಿಕ್ಷಣ ಸಂಸ್ಥೆಗಳು, ಸಿಬಿಎಸ್‌ಸಿ, ಐಸಿಎಸ್‌ಸಿ ಸೇರಿದಂತೆ ನವೋದಯ, ಕಿತ್ತೂರರಾಣಿ ಚೆನ್ನಮ್ಮ, ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಸೇರಿ ರಾಜ್ಯದ ಸರ್ಕಾರಿ, ಅರೆಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಹ ೧ರಿಂದ ೧೦ನೇ ತರಗತಿಯವರೆಗೆ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಲಿಸಬೇಕು ಎಂದು ಆಗ್ರಹಿಸಿದರು.

ಹಿಂದಿ ಭಾಷೆಯ ಕಲಿಕೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ ಹಾಗೂ ಇದರಿಂದ ಉಳಿದ ವಿಷಯಗಳಲ್ಲಿ ಏಕಾಗ್ರತೆ ಮೂಡದೆ ನಾಡಿನ ಪ್ರತಿಭಾವಂತ ಮಕ್ಕಳು ಕಡಿಮೆ ಅಂಕಗಳಿಗೆ ತೃಪ್ತಿ ಪಟ್ಟುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಬ್ಯಾಂಕಿಂಗ್, ರೈಲ್ವೆ ಸೇರಿದಂತೆ ಒಕ್ಕೂಟ ಸರ್ಕಾರದ ಉದ್ಯೋಗಗಳಿಂದ ವಂಚಿತರಾಗುವುದಲ್ಲದೇ, ರಾಜ್ಯದ ಪ್ರತಿಷ್ಠಿತ ಕಂಪನಿಗಳ ಉದ್ಯೋಗಗಳು ಪರರಾಜ್ಯದವರ ಪಾಲಾಗುತ್ತಿವೆ. ವೈದ್ಯಕೀಯ,ದಂತ ವೈದ್ಯಕೀಯ ಹಾಗೂ ಐಐಟಿಗಳಂತ ಪ್ರತಿಷ್ಠಿತ ಉನ್ನತ ವ್ಯಾಸಂಗಕ್ಕೆ ತೆರಳಲು ನಾಡಿನ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೆರೆಯ ತಮಿಳುನಾಡು ಮಾದರಿಯಲ್ಲಿ ದ್ವಿಭಾಷಾ ನೀತಿಯ ಪಠ್ಯಕ್ರಮವನ್ನು ರಾಜ್ಯದ ಶಿಕ್ಷಣ ಕ್ರಮದಲ್ಲಿ ೧೧ದಿನಗಳ ಗಡುವಿನಲ್ಲಿ ಜಾರಿಗೊಳಿಸಬೇಕು. ಮೊದಲ ಹಂತದ ೪೪೦ ಹಾಗೂ ಎರಡನೇ ಹಂತದಲ್ಲಿ ೯೩೭ ಉರ್ದು ಮಾಧ್ಯಮ ಶಾಲೆಗಳನ್ನೂ, ಆಂಗ್ಲ ಮಾಧ್ಯಮ ಶಾಲೆಗಳನ್ನಾಗಿ ಮಾರ್ಪಾಡು ಮಾಡುತ್ತಿರುವುದು ಸರಿಯಷ್ಟೇ? ಆದರೆ ಈ ಶಾಲೆಗಳನ್ನು ಕನ್ನಡ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವ ಸುತ್ತೊಲೆಯನ್ನು ಈ ಕೂಡಲೇ ತುರ್ತು ಹೊರಡಿಸಬೇಕು ಎಂದು ಶಿಕ್ಷಣ ಸಚಿವರನ್ನು ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಮ್, ಮುದ್ದೇಗೌಡ, ಪ್ರಜ್ವಲ್, ಮನೋಹರ್ ಸಿ., ಪ್ರಕಾಶ್, ಸರ್ವೇಶ್ ಸೇರಿದಂತೆ ಹಲವರು ಇದ್ದರು.

PREV

Recommended Stories

ತುಮಕೂರು ಜಿಲ್ಲೆಯಲ್ಲಿ ಫಾರ್ಮರ್ ಸಿಟಿ ಸ್ಥಾಪಿಸಲು ಕುಂದರಹಳ್ಳಿ ರಮೇಶ್ ಆಗ್ರಹ
ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ರೆಡ್ಡಿ ಅಂತ್ಯಕ್ರಿಯೆ