ಬಿ.ಕೆ.ಸಂಗಮೇಶ್‌ಗೆ ಸಚಿವ ಸ್ಥಾನ, ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನಕ್ಕೆ ಆಗ್ರಹ

KannadaprabhaNewsNetwork |  
Published : Jun 03, 2026, 01:30 AM IST
ಪೊಟೋ: 02ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಆರ್. ಸಜ್ಜನ್ ಮಾತನಾಡಿದರು.  | Kannada Prabha

ಸಾರಾಂಶ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ವೀರಶೈವ ಮಹಾಸಭಾದ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಆರ್. ಸಜ್ಜನ್ ಒತ್ತಾಯಿಸಿದರು.

ಶಿವಮೊಗ್ಗ: ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ವೀರಶೈವ ಮಹಾಸಭಾದ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಆರ್. ಸಜ್ಜನ್ ಒತ್ತಾಯಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿ.ಕೆ.ಸಂಗಮೇಶ್ ಅವರು ಭದ್ರಾವತಿ ನಗರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ ಅವರು ಕಳೆದ ಬಾರಿಯೇ ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಚುನಾವಣೆಗೂ ಮುನ್ನ ಸ್ವತಃ ಸಿದ್ಧರಾಮಯ್ಯನವರು ಸಂಗಮೇಶ್ ಅವರನ್ನು ಗೆಲ್ಲಿಸಿಕೊಟ್ಟರೆ ಅವರಿಗೆ ಸಚಿವಸ್ಥಾನ ನೀಡುವುದಾಗಿ ಘೋಷಿಸಿದ್ದರು. ಆದರೆ, ಅಂದಿನ ಪರಿಸ್ಥಿತಿಯಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈಗ ಇನ್ನುಳಿದ 2 ವರ್ಷಕ್ಕಾದರೂ ಸಚಿವ ಸ್ಥಾನ ನೀಡಲೇಬೇಕೆಂದು ಪಕ್ಷಾತೀತವಾಗಿ ಮಹಾಸಭಾದಿಂದ ಒತ್ತಾಯಿಸಿದರು. ಅರಣ್ಯ ಇಲಾಖೆಯ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜನಪ್ರಿಯ ಸಚಿವ ಈಶ್ವರ ಖಂಡ್ರೆ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಅನಿತಾ ರವಿಶಂಕರ್, ಪ್ರಮುಖರಾದ ಚಂದ್ರಶೇಖರ ಮಂಚಾಲಿ, ದಿನೇಶ್, ಅನಿಲ್‌ಕುಮಾರ್, ವಾಗ್ಧೇವಿ, ಮಲ್ಲಿಕಾರ್ಜುನ ಕಾನೂನು, ಲಕ್ಷ್ಮೀ ಪೂಜಾರ್, ಸುನೀತಾ ದಿನೇಶ್, ಸಚ್ಚಿನ್ ಪೂಜಾರಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆ ಮಕ್ಕಳಿಗೆ ಮನ್ಮುಲ್ ಒಕ್ಕೂಟದ ದರ್ಶನ: ಸಿ.ಶಿವಕುಮಾರ್
ರೈತ ಫಲಾನುಭವಿಗಳಿಗೆ ಮನ್ಮುಲ್‌ನಿಂದ ಡಿಜಿಟಲ್ ಪೇಮೆಂಟ್: ಸಿ.ಶಿವಕುಮಾರ್