ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ಡಿ.ಮಾಲತೇಶ ರಾವ್ ಜಾಧವ್, ಮಾಜಿ ಸಚಿವ ಸಂತೋಷ್ ಲಾಡ್ ಅವರಿಗೆ ನೂತನ ಸಿಎಂ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಅಥವಾ ಸಂಪುಟ ದರ್ಜೆ ಸಚಿವರಾಗಿ ಮಾಡಿ, ಪ್ರಮುಖ ಖಾತೆಯನ್ನು, ಹಾನಗಲ್ ಶಾಸಕ ಶ್ರೀನಿವಾಸ ಮಾನೆಗೆ ಸಂಪುಟ ದರ್ಜೆ ಸಚಿವರಾಗಿ ಮಾಡಬೇಕು ಎಂದರು.
ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಸಮುದಾಯ ನಮ್ಮದು. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಲಾಡ್ ಅನೇಕ ಮಾನವೀಯ ಕಾರ್ಯ, ಕಾರ್ಮಿಕರ ಪರ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಲಾಡ್ ಅತ್ಯಂತ ಸಮರ್ಥವಾಗಿ ಕೆಲಸ ಮಾಡಿದ್ದಾರೆ. ಪೆಹಲ್ಗಾಂ ದಾಳಿ ಮತ್ತು ಉತ್ತರಾಖಂಡದ ಪ್ರಾಕೃತಿಕ ವಿಕೋಪ ವೇಳೆ ಸಿಲುಕಿಕೊಂಡಿದ್ದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ವಹಿಸಿದ್ದ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಸಂತೋಷ ಲಾಡ್‌ಗೆ ಸಲ್ಲುತ್ತದೆ ಎಂದು ತಿಳಿಸಿದರು.ಕಾರ್ಮಿಕರ ಪರವಾಗಿ ಸಂತೋಷ ಲಾಡ್ ಸಾಕಷ್ಟು ಉತ್ತಮ ಕೆಲಸ ಮಾಡಿ, ಕಾರ್ಮಿಕರ ಮನ ಗೆದ್ದಿದ್ದಾರೆ. ಕಾರ್ಮಿಕರಿಗಾಗಿ ಅನೇಕ ಉತ್ತಮ ಕೆಲಸ ಮಾಡಿದ್ದಾರೆ. ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಆದರೂ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಹಿಂದುಳಿದ ವರ್ಗವಾದ ಕ್ಷತ್ರಿಯ ಮರಾಠ ಸಮಾಜಕ್ಕೆ ಪ್ರಾತಿನಿಧ್ಯವನ್ನೇ ನೀಡಿಲ್ಲ. ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಬೇರೆ ಸಮುದಾಯಕ್ಕೆ 3 ಸಚಿವ ಸ್ಥಾನ ನೀಡಿದ್ದಾರೆ. ಮರಾಠ ಸಮುದಾಯದಿಂದ ಸಂತೋಷ್ ಲಾಡ್, ಶ್ರೀನಿವಾಸ ಮಾನೆ ಮಾತ್ರ ಗೆದ್ದಿದ್ದಾರೆ ಎಂದು ಅವರು ಹೇಳಿದರು.
ದಾವಣಗೆರೆ ಜಿಲ್ಲೆಗೂ ನೂತನ ಸಿಎಂ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ನೀಡಿಲ್ಲ. ಉತ್ತರ ಶಾಸಕ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಡಿಕೆಶಿ ಸಂಪುಟದಲ್ಲಿ ಪ್ರಮುಖ ಖಾತೆ ನೀಡುವ ಮೂಲಕ ಮಧ್ಯ ಕರ್ನಾಟಕಕ್ಕೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಡಿ.ಕೆ.ಶಿವಕುಮಾರ ಹಾಗೂ ರಾಜ್ಯ ನಾಯಕರು ಸ್ಪಂದಿಸಬೇಕು. ಒಂದು ವೇಳೆ ಹೊಸದಾಗಿ ಶಾಸಕರಾಗಿ ಆಯ್ಕೆಯಾದವರಿಗೂ ಸಚಿವ ಸ್ಥಾನ ನೀಡಿದರೆ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ ಸಮರ್ಥ ಎಂ. ಶಾಮನೂರುಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
- - -
- ಡಿ.ಮಾಲತೇಶ ರಾವ್ ಜಾಧವ್, ಅಧ್ಯಕ್ಷ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ.