ಅರ್ಹ ಸಂತ್ರಸ್ತರಿಗೆ ಅವರ ಹಕ್ಕಿನ ಭೂಮಿಯನ್ನು ನ್ಯಾಯಯುತವಾಗಿ ಮಂಜೂರು ಮಾಡಬೇಕು. ತನಿಖೆಯ ಪ್ರಗತಿ ಹಾಗೂ ಅಂತಿಮ ವರದಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದರು. ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ತಮ್ಮ ಭೂಮಿ ಹಾಗೂ ಜೀವನೋಪಾಯವನ್ನು ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ನೈತಿಕ ಹಾಗೂ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ. ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ನೈಜ ಸಂತ್ರಸ್ತರ ಹಿತದೃಷ್ಟಿಯಿಂದ ಈ ಪ್ರಕರಣವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಶೀಘ್ರ ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಕೆಆರ್‌ಎಸ್ ಪಕ್ಷ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ನೈಜ ಭೂ ಸಂತ್ರಸ್ತರಿಗೆ ನ್ಯಾಯಯುತವಾಗಿ ಭೂಮಿ ಮಂಜೂರು ಮಾಡುವುದರ ಜೊತೆಗೆ, ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮುಖಂಡರು ಒತ್ತಾಯಿಸಿದರು.ಗುರುವಾರ ಕೆಆರ್‌ಎಸ್ ಪಕ್ಷದ ಮುಖಂಡರು ಸಕಲೇಶಪುರ ಉಪವಿಭಾಗಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಭೂ ಹಂಚಿಕೆ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿದರು.
ಮನವಿಯಲ್ಲಿ, ಹೇಮಾವತಿ ಮುಳುಗಡೆ ಸಂತ್ರಸ್ತರ ಅಧಿಕೃತ ಪಟ್ಟಿಯನ್ನು ಸಾರ್ವಜನಿಕರ ಮುಂದಿಡಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಿತ ದಾಖಲೆಗಳಲ್ಲಿ ಯಾವುದೇ ತಿದ್ದುಪಡಿ ಅಥವಾ ನಾಶವಾಗದಂತೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಬೇಕು. ಅರ್ಹ ಸಂತ್ರಸ್ತರಿಗೆ ಅವರ ಹಕ್ಕಿನ ಭೂಮಿಯನ್ನು ನ್ಯಾಯಯುತವಾಗಿ ಮಂಜೂರು ಮಾಡಬೇಕು. ತನಿಖೆಯ ಪ್ರಗತಿ ಹಾಗೂ ಅಂತಿಮ ವರದಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದರು. ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ತಮ್ಮ ಭೂಮಿ ಹಾಗೂ ಜೀವನೋಪಾಯವನ್ನು ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ನೈತಿಕ ಹಾಗೂ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ. ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ನೈಜ ಸಂತ್ರಸ್ತರ ಹಿತದೃಷ್ಟಿಯಿಂದ ಈ ಪ್ರಕರಣವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಶೀಘ್ರ ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಕೆಆರ್‌ಎಸ್ ಪಕ್ಷ ಆಗ್ರಹಿಸಿದರು.ಮನವಿ ಸಲ್ಲಿಸುವ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಹಾಗೂ ಸಕಲೇಶಪುರ ತಾಲೂಕು ಉಸ್ತುವಾರಿ ಸಚಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧು, ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಡಿ. ಎಚ್, ಸಂಘಟನಾ ಕಾರ್ಯದರ್ಶಿ ಲಕ್ಷ್ಮಿಗೌಡ, ಇಬ್ರಾಹಿಂ, ತಾಲೂಕು ಅಧ್ಯಕ್ಷ ಯೂನಸ್, ಮುಖಂಡ ತಮ್ಮೇಗೌಡ ಹರಳಹಳ್ಳಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.