ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಆಗ್ರಹ

KannadaprabhaNewsNetwork |  
Published : Nov 06, 2025, 02:30 AM IST
(5ಎನ್.ಆರ್.ಡಿ4 ಸರ್ಕಾರ ರೈತರ ಬೆಳೆ ಹೆಸರನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ನೀಡಿದರು.)  | Kannada Prabha

ಸಾರಾಂಶ

ಬೆಳೆ ಕಟಾವಿಗೆ ಬಂದ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹೆಸರುಕಾಳು ಸ್ವಲ್ಪ ಡ್ಯಾಮೇಜ್ ಆಗಿದ್ದರಿಂದ ವ್ಯಾಪಾರಸ್ಥರಿಗೆ ಫಸಲು ಮಾರಾಟ ಮಾಡಬೇಕೆಂದರೆ ಯೋಗ್ಯ ಬೆಲೆ ಸಿಗುತ್ತಿಲ್ಲ.

ನರಗುಂದ: ಹೆಸರುಕಾಳನ್ನು ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿ ಮಾಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದೆಂದು ರಾಜ್ಯ ರೈತಸೇನಾ ಸಂಘಟನೆಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಎಚ್ಚರಿಸಿದರು.

ಬುಧವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ರೈತಸೇನೆ ಸಂಘಟನೆಯ ನೇತೃತ್ವದಲ್ಲಿ ತಹಸೀಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ವಾಣಿಜ್ಯ ಬೆಳೆಯಾದ ರೈತರು ಹೆಸರು ಬಿತ್ತನೆ ಮಾಡಿ ಉತ್ತಮ ಬೆಳೆ ಬೆಳೆಸಿದ್ದರು.

ಬೆಳೆ ಕಟಾವಿಗೆ ಬಂದ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹೆಸರುಕಾಳು ಸ್ವಲ್ಪ ಡ್ಯಾಮೇಜ್ ಆಗಿದ್ದರಿಂದ ವ್ಯಾಪಾರಸ್ಥರಿಗೆ ಫಸಲು ಮಾರಾಟ ಮಾಡಬೇಕೆಂದರೆ ಯೋಗ್ಯ ಬೆಲೆ ಸಿಗುತ್ತಿಲ್ಲ. ಬೆಂಬಲ ಬೆಲೆ ಕೇಂದ್ರದಲ್ಲಿ ಮಾರಾಟ ಮಾಡಲು ಹೋದರೆ ಬೆಂಬಲ ಬೆಲೆ ಕೇಂದ್ರದ ಅಧಿಕಾರಿಗಳು ಹೆಸರುಕಾಳು ಗುಣಮಟ್ಟದಿಲ್ಲವೆಂದು ಹೇಳುತ್ತಾರೆ ಎಂದರು.

ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಸರು ಕಾಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ತಿಳಿಸಬೇಕು. ಒಂದು ವೇಳೆ ಸರ್ಕಾರ ರೈತರ ಬೆಳೆದ ಹೆಸರು ಕಾಳನ್ನು ಖರೀದಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

ಉಪತಹಸೀಲ್ದಾರ್ ಪರಶುರಾಮ ಕಲಾಲ ಅವರು ರೈತರ ಮನವಿ ಸ್ವೀಕರಿಸಿ ಮನವಿಯನ್ನು ಸರ್ಕಾರಕ್ಕೆ ರವಾನೆ ಮಾಡಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಫಕೀರಪ್ಪ ಅಣ್ಣಿಗೇರಿ, ಯಲ್ಲಪ್ಪ ಚಲವಣ್ಣವರ, ಪರಮೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವಾಣ, ವಿಜಯಕುಮಾರ ಹೂಗಾರ ಇದ್ದರು. ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ ತಡೆಗೆ ಆಗ್ರಹ

ಗದಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಪಡಿತರ ಅಕ್ಕಿ ಕಳ್ಳಸಾಗಾಣಿಕೆ ತಡೆಹಿಡಿಯುವಂತೆ ಒತ್ತಾಯಿಸಿ ಎಪಿಜೆ ಅಬ್ದುಲ್ ಕಲಾಂ ವಿವಿಧೋದ್ದೇಶಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಉಸ್ಮಾನ ಎಂ. ಮಾಳೆಕೊಪ್ಪ ಮಾತನಾಡಿ, ಜಿಲ್ಲೆ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಬಡ ಕುಟುಂಬದವರಿಗೆ ಸರ್ಕಾರ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದ್ದು, ಆ ಅಕ್ಕಿಯನ್ನು ಮುಂಬೈ, ಗೋವಾ ರಾಜ್ಯಗಳಿಗೆ ಸಾಗಾಟ ಮಾಡುತ್ತಿದ್ದಾರೆ. ಈ ಬಗ್ಗೆ ಜಿಲ್ಲೆಯಲ್ಲಿ ಅನೇಕ ಪ್ರಕರಣಗಳು ದಾಖಲಾಗಿದ್ದರೂ ಆಹಾರ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದರು.

ಈ ವೇಳೆ ದಾವಲಸಾಬ ಮುಳಗುಂದ, ಇಮ್ರಾನ ಮಾಳೆಕೊಪ್ಪ, ಫಾರೂಕ ಕಟ್ಟಿಮನಿ, ಅಸ್ಲಾಂ ಢಾಲಾಯತ, ಆರೀಫ್‌ ಮುಳಗುಂದ, ಮಹಮ್ಮದಅಲಿ ನವಲಗುಂದ, ಯಾಸೀರಖಾನ, ಸರಫರಾಜ ಬಾವಿಕಟ್ಟಿ, ಜಾಫರ ಹರಪನಹಳ್ಳಿ ಸೇರಿದಂತೆ ಮುಂತಾದವರು ಇದ್ದರು.

PREV

Recommended Stories

ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ನಿಂದ ರಸಪ್ರಶ್ನೆ ಸ್ಪರ್ಧೆ
ಕುತಂತ್ರ-ಅಸೂಯೆಯಿಂದ ಟನಲ್‌ ರಸ್ತೆಗೆ ಬಿಜೆಪಿ ವಿರೋಧ : ಡಿ.ಕೆ.ಸು