ಕನ್ನಡಪ್ರಭ ವಾರ್ತೆ ಕುಶಾಲನಗರ
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮತ್ತು ಇತರರು ಮುಳ್ಳುಸೋಗೆ ಗ್ರಾಮ ಪಂಚಾಯಿತಿಯನ್ನು ಯಥಾ ಸ್ಥಿತಿಯಲ್ಲಿ ಮತ್ತೆ ಸ್ಥಾಪಿಸಬೇಕೆಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಕುಶಾಲನಗರ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಚುನಾವಣೆಯ ವಿಷಯದಲ್ಲಿ ಕ್ಷೇತ್ರದ ಶಾಸಕರನ್ನು ಅನಾವಶ್ಯಕವಾಗಿ ಪ್ರಸ್ತಾಪಿಸಿರುವುದು ಖಂಡನೀಯ. ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ರಿಟ್ ಪೆಟಿಷನ್ ಸಲ್ಲಿಸಿ ಚುನಾವಣೆಗೆ ತಡೆಯಾಜ್ಞೆಯನ್ನು ಶಿವಾನಂದ ಅವರೇ ತಂದಿರುತ್ತಾರೆ. ಅಲ್ಲದೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ 2022 ರಲ್ಲಿ ನಿರ್ಣಯ ಕೈಗೊಂಡು ತಮ್ಮ ಆಡಳಿತ ರದ್ದುಗೊಳಿಸುವ ಮೂಲಕ ಪುರಸಭೆ ರಚನೆಗೆ ಅವಕಾಶ ಮಾಡಿ ಕೊಟ್ಟಿರುತ್ತಾರೆ ಎಂದು ಹೇಳಿದರು.ಪುರಸಭೆಗೆ ವಿಲೀನಗೊಂಡ ವೇಳೆಗೆ ಗ್ರಾಮ ಪಂಚಾಯಿತಿ ಸದಸ್ಯತ್ವ ರದ್ದಾಗಿದೆ.
ಶಾಸಕರು ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯ ನಾಗರಿಕರನ್ನು ಕಡೆಗಣನೆ ಮಾಡುತ್ತಿರುವ ಆರೋಪ ಸುಳ್ಳು ಎಂದ ಶಶಿಧರ್, ಕಳೆದ ಹಲವು ಸಮಯದಿಂದ ಮುಳ್ಳುಸೋಗೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಜನಪರ ಕಾರ್ಯ ನಡೆಯುತ್ತಿದೆ ಎಂದರು.
ಮುಳುಸೋಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುತ್ತಿದೆ.
ಪುರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿರುವ ಜಿ ಬಿ ಜಗದೀಶ್, ಹರೀಶ್, ನವೀನ್ ಪ್ರಕಾಶ್ , ಪದ್ಮ ಮಾತನಾಡಿ, ಮುಳ್ಳುಸೋಗೆ ಗ್ರಾಮ ಶಾಸಕರ ಸಲಹೆ ಸೂಚನೆಯಂತೆ ಸಮಗ್ರ ಅಭಿವೃದ್ಧಿ ಕಾಣುತ್ತಿದೆ. ಶಾಸಕರನ್ನು ಅನಾವಶ್ಯಕವಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವಿಷಯದಲ್ಲಿ ಎಳೆದು ತರುವುದು ಬೇಡ. ತಮ್ಮ ಅವಧಿಯಲ್ಲಿ ನಡೆಸಿದ ಕೆಲಸ ಕಾರ್ಯಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.