ಡಿಸಿಸಿ ಬ್ಯಾಂಕ್‌ ನೇಮಕಾತಿ ಅರ್ಜಿ ಶುಲ್ಕ ಮರುಪಾವತಿಗೆ ಒತ್ತಾಯ

KannadaprabhaNewsNetwork |  
Published : Sep 23, 2026, 03:00 AM IST
ಹೈಕೋರ್ಟ್  | Kannada Prabha

ಸಾರಾಂಶ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇರ ನೇಮಕಾತಿಗಾಗಿ ಜು.21 ರಂದು ಪ್ರಕಟಿಸಲಾಗಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 21 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಂದ ಸಂಗ್ರಹಿಸಿರುವ ಅಂದಾಜು ₹1.5 ಕೋಟಿ ಅರ್ಜಿ ಶುಲ್ಕವನ್ನು ಮರುಪಾವತಿಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭೀಮಪ್ಪ ಗಡಾದ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇರ ನೇಮಕಾತಿಗಾಗಿ ಜು.21 ರಂದು ಪ್ರಕಟಿಸಲಾಗಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 21 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಂದ ಸಂಗ್ರಹಿಸಿರುವ ಅಂದಾಜು ₹1.5 ಕೋಟಿ ಅರ್ಜಿ ಶುಲ್ಕವನ್ನು ಮರುಪಾವತಿಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭೀಮಪ್ಪ ಗಡಾದ ಒತ್ತಾಯಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ನೇಮಕಾತಿ ಅಧಿಸೂಚನೆಯಲ್ಲಿ ತಾಂತ್ರಿಕ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರವೇ ಅಧಿಸೂಚನೆಯನ್ನು ರದ್ದುಪಡಿಸಿರುವುದರಿಂದ, ಅಭ್ಯರ್ಥಿಗಳಿಂದ ಸ್ವೀಕರಿಸಿರುವ ಅರ್ಜಿ ಶುಲ್ಕವನ್ನು ಮರುಪಾವತಿಸುವುದು ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.ಡಿಸಿಸಿ ಬ್ಯಾಂಕ್‌ನಿಂದ ಜು.21ರಂದು ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯಲ್ಲಿ ಸುಮಾರು 9 ಬಗೆಯ ಲೋಪದೋಷಗಳಿರುವುದು ಕೆಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ, ಆಗಸ್ಟ್ 25ರಂದು ಅಧಿಸೂಚನೆಯನ್ನು ರದ್ದುಪಡಿಸುವಂತೆ ಸಹಕಾರ ಸಂಘಗಳ ನಿಬಂಧಕರು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದರು ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಹೊಸ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಹಳೆಯ ಅರ್ಜಿಗಳನ್ನೇ ಪರಿಗಣಿಸುವ ಕುರಿತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಜೊಲ್ಲೆ ಅವರು ನೀಡಿರುವ ಹೇಳಿಕೆಯೂ ಗೊಂದಲಕ್ಕೆ ಕಾರಣವಾಗಿದೆ. ಹಿಂದಿನ ಅಧಿಸೂಚನೆಯಡಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹಳೆಯ ಅರ್ಜಿಗಳನ್ನೇ ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.ಅಧಿಸೂಚನೆಯನ್ನೇ ರದ್ದುಪಡಿಸಿದ ಬಳಿಕ ಹಳೆಯ ಅರ್ಜಿಗಳನ್ನು ಯಾವ ನಿಯಮದಡಿ ಹೊಸ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲಾಗುತ್ತದೆ ಎಂಬುದನ್ನು ಸರ್ಕಾರ ಹಾಗೂ ಬ್ಯಾಂಕ್ ಸ್ಪಷ್ಟಪಡಿಸಬೇಕು. ಈ ಕುರಿತು ಅಭ್ಯರ್ಥಿಗಳಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು ಎಂದು ಆಗ್ರಹಿಸಿದ್ದಾರೆ.ರದ್ದಾದ ಅಧಿಸೂಚನೆಯಡಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಪಡೆದ ಅರ್ಜಿ ಶುಲ್ಕವನ್ನು ಮರುಪಾವತಿಸದಿದ್ದರೇ ಅದನ್ನು ಸೇವೆಯಲ್ಲಿನ ನ್ಯೂನತೆ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬ ಅಂಶವನ್ನೂ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹಳೆಯ ಅರ್ಜಿಗಳನ್ನೇ ಪರಿಗಣಿಸುವುದಕ್ಕೆ ಕಾನೂನು ಹಾಗೂ ನಿಯಮಾವಳಿ ಏನು? ಡಿಸಿಸಿ ಬ್ಯಾಂಕ್ ಯಾವ ನಿಯಮದಡಿ ಕಾರ್ಯನಿರ್ವಹಿಸುತ್ತಿದೆ ಎಂಬುವುದನ್ನು ಸರ್ಕಾರವೇ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತನ್ಯ ಮಹಿಳಾ ಬ್ಯಾಂಕ್‌; ಶೇ.6ರಷ್ಟು ಲಾಭಾಂಶ ವಿತರಣೆ
ಬರ ಘೋಷಣೆಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ