ಖಾಸಗಿ ಆಸ್ಪತ್ರೆಗಳ ಆರೋಗ್ಯ ಸಂಜೀವಿನಿ ನೋಂದಣಿಗೆ ಆಗ್ರಹ

KannadaprabhaNewsNetwork |  
Published : Nov 03, 2025, 03:03 AM IST
01ಸಂಜೀವಿನಿಜಿಲ್ಲಾ ಸರ್ಕಾರಿನೌಕರರು ಉಸ್ತುವಾರಿ ಸಚಿವೆಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘವು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.

ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್‌ಗೆ ಮನವಿ

ಕನ್ನಡಪ್ರಭ ವಾರ್ತೆ ಉಡುಪಿರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘವು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.ರಾಜ್ಯದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿದೆ. ಅದರಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜೊತೆ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಲು ಆದೇಶಿಸಲಾಗಿರುತ್ತದೆ. ಉಡುಪಿ ಜಿಲ್ಲೆಯಲ್ಲಿ ಕೇವಲ 2 ಆಸತ್ರೆಗಳು ಮಾತ್ರ ನೋಂದಣಿಗೊಂಡಿದ್ದು, ಇತರ ಆಸ್ಪತ್ರೆಗಳ ನೋಂದಣಿ ಮಾಡದಿರುವುದರಿಂದ ಈ ಭಾಗದ ಸರ್ಕಾರಿ ನೌಕರರು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.ಮುಖ್ಯವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಆದರ್ಶ ಆಸ್ಪತ್ರೆ, ಹೈಟೆಕ್ ಆಸ್ಪತ್ರೆ, ಸಿಟಿ ಹಾಸ್ಪಿಟಲ್, ಪ್ರಸಾದ್ ನೇತ್ರಾಲಯ, ಕುಂದಾಪುರದ ಚಿನ್ಮಯಿ ಆಸ್ಪತ್ರೆ ಸೇರಿದಂತೆ ಆಧುನಿಕ ವೈದ್ಯಕೀಯ ಸವಲತ್ತುಗಳನ್ನು ಹೊಂದಿರುವ ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಣಿಯಾದಲ್ಲಿ ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರಿಗೆ, ಅವಲಂಬಿತರು ನಿರಾಂತಕವಾಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಈ ಸಂದರ್ಭ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತಣ್ಣ, ಜಿಲ್ಲಾ ಖಜಾಂಚಿ ದಯಾನಂದ್ ಬೆನ್ನೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧರ್ಮೇಂದ್ರ ಎಸ್, ಸಂಘದ ನಿರ್ದೇಶಕರಾದ ಶ್ರೀಕಾಂತ್ ಹಾಗೂ ದೀಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕಾಪು ತಾಲೂಕು ಅಧ್ಯಕ್ಷ ಬಸವರಾಜ್, ನಿರ್ದೇಶಕ ಅಚ್ಚುತ ಭಟ್ ಉಪಸ್ಥಿತರಿದ್ದರು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ